ಜನಪ್ರತಿನಿಧಿಗಳ ಕೋರ್ಟ್ಗೆ ಶರಣಾಗುತ್ತೇನೆ: ಶಾಸಕ ವಿನಯ ಕುಲಕರ್ಣಿ
I will surrender to the court of people's representatives: MLA Vinay Kulkarni
ಧಾರವಾಡ: ಕೋರ್ಟ್ ಆದೇಶಕ್ಕೆ ತಲೆಬಾಗುತ್ತೇನೆ. ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಕೋರ್ಟ್ಗೆ ಶರಣಾಗುತ್ತೇನೆ ಎಂದು ಶಾಸಕ ವಿನಯ ಕುಲಕರ್ಣಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿ ಅವರಿಗೆ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಜೂನ್ 6ರಂದು ರದ್ದುಪಡಿಸಿತ್ತು. ವಾರದೊಳಗೆ ವಿಚಾರಣಾ ಕೋರ್ಟ್ ಮುಂದೆ ಶರಣಾಗುವಂತೆ ಆದೇಶಿಸಿತ್ತು.
ಬೆಳಗಾವಿ
ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನನ್ನ ವಿರುದ್ಧ ಹುನ್ನಾರ ನಡೆದಿದೆ. ನಾನೀಗ ಅಸಹಾಯಕ ಸ್ಥಿತಿಯಲ್ಲಿದ್ದೇನೆ. ಸತ್ಯಕ್ಕೆ ಜಯ ಸಿಗುವ ನಂಬಿಕೆ
ಇದೆ ಎಂದರು.
ಬಸವಣ್ಣನ
ಕಾಲದಲ್ಲೂ ಕೊಂಡಿ ಮಂಚಣ್ಣಗಳು ಇದ್ದರು. ಇವತ್ತೂ ಇದ್ದಾರೆ ಎಂದೂ ಮಾರ್ಮಿಕವಾಗಿ ನುಡಿದರು.
ಕ್ಷೇತ್ರದಲ್ಲಿ
ನಾನು ಇಲ್ಲದಿದ್ದರೂ ಪತ್ನಿ, ಪುತ್ರಿ, ಪಕ್ಷದ ಮುಖಂಡರು ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಾರೆ. ಅಧಿಕಾರಿಗಳ ಸಭೆ ನಡೆಸಿದ್ದೇನೆ. ಅಭಿವೃದ್ಧಿ ಕಾರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 