ನಾಡಗೌಡರ ಕುರಿತು ವರಿಷ್ಠರೊಂದಿಗೆ ಮಾತನಾಡುತ್ತೇನೆ: ಸಿಎಂ
I will talk to the leaders about Nadagouda: CM
ತಾಳಿಕೋಟಿ 26 : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ನಾಡಗೌಡರು ನಮ್ಮ ಪಕ್ಷಕ್ಕಾಗಿ ಬಹಳಷ್ಟು ತ್ಯಾಗವನ್ನು ಮಾಡಿದ್ದಾರೆ ಅವರ ಶ್ರಮ ಬಹಳಷ್ಟು ಇದೆ ಇದರ ಅರಿವು ನಮಗೆಲ್ಲರಿಗೂ ಇದೆ ಅವರ ದುಡಿಮೆಗೆ ತಕ್ಕ ಪ್ರತಿಫಲ ಅವರಿಗೆ ಸಿಗಬೇಕು ಇದು ನನ್ನ ಬಯಕೆಯೂ ಆಗಿದೆ ಅವರ ಕುರಿತು ವರಿಷ್ಠರೊಂದಿಗೆ ಪ್ರಾಮಾಣಿಕವಾಗಿ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.
ಶುಕ್ರವಾರ ಬೆಂಗಳೂರಿನ ಅವರ ನಿವಾಸದಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಬೆಂಬಲಿಗರು ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡಿ ಎಂದು ಒತ್ತಾಯ ಮಾಡಲು ಆಗಮಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು. ನಾನು ಮತ್ತು ನಾಡಗೌಡರು ಏಕಕಾಲದಲ್ಲಿ ಪಕ್ಷದಲ್ಲಿ ಇದ್ದು ಕೂಡಿಕೊಂಡು ಕೆಲಸ ಮಾಡಿದ್ದೇವೆ. ಅವರು ಜಿಲ್ಲಾ ಪಂಚಾಯತಿಯಿಂದ ತಮ್ಮ ರಾಜಕೀಯ ಜೀವನ ಆರಂಭಿಸಿ ಸುಮಾರು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ಪಕ್ಷದಲ್ಲಿ 40 ವರ್ಷಗಳವರೆಗೆ ನಿಷ್ಠರಾಗಿ ಕೆಲಸ ಮಾಡಿದ್ದಾರೆ ಅವರ ಕುರಿತು ನನಗೆ ವೈಯಕ್ತಿಕವಾಗಿ ಬಹಳಷ್ಟು ಅಭಿಮಾನವಿದೆ.
ಅವರಿಗೆ ಹಿಂದಿನ ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಅವಧಿಯಲ್ಲಿಯೇ ಸಚಿವ ಸ್ಥಾನ ಸಿಗಬೇಕಾಗಿತ್ತು ಆದರೆ ಕಾರಣಾಂತರಗಳಿಂದ ಸಿಕ್ಕಿಲ್ಲ ಆದರೆ ನಾನು ಅವರ ಕುರಿತು ವರಿಷ್ಠರಲ್ಲಿ ಪ್ರಾಮಾಣಿಕವಾಗಿ ಮಾತನಾಡುತ್ತೇನೆ ಅವರ ಕುರಿತು ಹೇಳಲು ತಾವುಗಳು ಇಲ್ಲಿಗೆ ಬರುವ ಅಗತ್ಯವಿರಲಿಲ್ಲ ಆದರೂ ಅಭಿಮಾನದಿಂದ ಬಂದಿದ್ದೀರಿ ತಮಗೆಲ್ಲರಿಗೂ ಅಭಿನಂದಿಸುತ್ತೇನೆ ನಾವೆಲ್ಲರೂ ಪಕ್ಷಕ್ಕಾಗಿ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಶಾಸಕ ಅಪ್ಪಾಜಿ ನಾಡಗೌಡರು ಸೇರಿದಂತೆ ತಾಳಿಕೋಟಿ ಮುದ್ದೇಬಿಹಾಳ ಹಾಗೂ ನಾಲತವಾಡ ಭಾಗದ ನೂರಾರು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 