ಕುವೆಂಪು ವಿವಿಯಿಂದ ಐಪಿಎಸ್ ಅಧಿಕಾರಿ ಹರ್ಷ.ಪಿ.ಎಸ್ ಅವರಿಗೆ ಪಿಎಚ್.ಡಿ ಪದವಿ
IPS officer Harsha P.S. awarded PhD degree from Kuvempu University
ಬಳ್ಳಾರಿ 27: ಕುವೆಂಪು ವಿಶ್ವವಿದ್ಯಾಲಯವು ವನ್ಯಜೀವಿ ಮತ್ತು ನಿರ್ವಹಣೆ ವಿಭಾಗದಲ್ಲಿ ನಡೆಸಿದ ಸಂಶೋಧನೆಗಾಗಿ ಬಳ್ಳಾರಿ ವಲಯ ಉಪಮಹಾನೀರೀಕ್ಷಕರು ಹಾಗೂ ಐಪಿಎಸ್ ಅಧಿಕಾರಿ ಹರ್ಷ.ಪಿ.ಎಸ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ.) ಪದವಿಯನ್ನು ಘೋಷಿಸಿದೆ.ಪಿ.ಎಸ್. ಹರ್ಷ ಅವರು, ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ಡಾ.ವಿಜಯ ಕುಮಾರ ಅವರ ಮಾರ್ಗದರ್ಶನದಲ್ಲಿ “ನಾಗರಹೊಳೆ, ಬಂಡೀಪುರ ಮತ್ತು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಸಂಖ್ಯೆಯ ಸ್ಥಿರತೆ ಹಾಗೂ ಮಾನವ-ಹುಲಿ ಸಂಘರ್ಷ ಮತ್ತು ಅದರ ಪ್ರಭಾವಗಳ ಕುರಿತಾದ ಒಂದು ಅಧ್ಯಯನ” ಎಂಬ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು. ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಮತ್ತು ಸಿಂಡಿಕೇಟ್ ಈ ಶಿಫಾರಸನ್ನು ಅಂಗೀಕರಿಸಿದ್ದು, ಮುಂಬರುವ ಘಟಿಕೋತ್ಸವದಲ್ಲಿ ಹರ್ಷ.ಪಿ.ಎಸ್ ಅವರು ಅಧಿಕೃತವಾಗಿ ಪದವಿ ಸ್ವೀಕರಿಸಲು ಅರ್ಹರಾಗಿದ್ದಾರೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 