ಜಿ.ಟಿ. ದೇವೇಗೌಡ ಜೆಡಿಎಸ್ ನಲ್ಲಿ ಇದ್ದಾರೆಯೇ?; ಎಚ್.ಡಿ. ಕುಮಾರ ಸ್ವಾಮಿ

ಬೆಂಗಳೂರು,ಫೆ.17, " ಜಿ.ಟಿ. ದೇವೇಗೌಡ ಇನ್ನೂ ಜೆಡಿಎಸ್ ನಲ್ಲಿಯೇ ಇದ್ದಾರೆಯೇ?. ಹೀಗೆಂದು ಪ್ರಶ್ನಿಸಿದ್ದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ.ವಿಧಾನ ಪರಿಷತ್ ಒಂದು ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಜಿ.ಟಿ ದೇವೇಗೌಡ ಬಿಜೆಪಿ ಅಭ್ಯರ್ಥಿ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪರವಾಗಿ  ಮತದಾನ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜಿ.ಟಿ.ಡಿ. ಇನ್ನೂ ಜೆಡಿಎಸ್ ನಲ್ಲಿಯೇ ಇದ್ದಾರೆಯೇ ಎಂದು ಪ್ರಶ್ನಿಸಿದರು. ಜಿ.ಟಿ.ದೇವೇಗೌಡ ಹಲವಾರು ಹೇಳಿಕೆಗಳನ್ನು ಕೊಟ್ಟುಕೊಂಡಿದ್ದಾರೆ. 

ಅವರು ಜೆಡಿಎಸ್ನಲ್ಲಿ ಇರುತ್ತಾರೆಯೋ ಕಾಂಗ್ರೆಸ್ನಲ್ಲಿ ಇರುತ್ತಾರೆಯೋ ಎಂಬುದನ್ನು ಕಾದು ನೋಡಬೇಕು. ಮತದಾನದಲ್ಲಿ ಭಾಗಿವಹಿಸುವುದು ಬೇಡ ಎಂದು ಶಾಸಕಾಂಗ ಸಭೆಯಲ್ಲಿ ತೀರ್ಮಾನ ತಗೊಂಡಿದ್ದೇವೆ. ಶಾಸಕಾಂಗ ಪಕ್ಷಕ್ಕೆ ಅಗೌರವ ಕೊಟ್ಟಿರುವುದು  ಜಿ.ಟಿ.ದೇವೇಗೌಡರಿಗೆ ಬಿಟ್ಟ ವಿಚಾರ ಎಂದರು.ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನವರು ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂದು ಸಂದೇಶ ನೀಡಿದ್ದರು.ಇದು ಉಪಯೋಗಕ್ಕೆ ಬರುವುದಿಲ್ಲ ಎಂದು ನಾವೂ ಚುನಾವಣೆಯಲ್ಲಿ ಭಾಗಿಯಾಗಿಲ್ಲ ಎಂದು ಕುಮಾರ ಸ್ವಾಮಿ ಸ್ಪಷ್ಟನೆ ನೀಡಿದರು.