ಜನವರಿ 24 ರಂದು ಇಸ್ಕಾನ್ ರಥಯಾತ್ರೆ
ISKCON Rath Yatra on January 24th
ಬೆಳಗಾವಿ 05: ಅಂತರರಾಷ್ಟ್ರೀಯ ಕೃಷ್ಣಭಾವನಾಮೃತ ಸಂಘ (ಇಸ್ಕಾನ್) ವತಿಯಿಂದ ನಡೆಯುವ ಶ್ರೀಕೃಷ್ಣ ರಥಯಾತ್ರೆಯು ಈ ಬಾರಿ ದಿ. 24 ಮತ್ತು 25 ಜನವರಿ 2026 ರಂದು ಬೆಳಗಾವಿ ನಗರದಲ್ಲಿ ನಡೆಯಲಿದೆ ಎಂದು ಇಸ್ಕಾನ್ ಬೆಳಗಾವಿ ಅಧ್ಯಕ್ಷರಾದ ಪರಮಪೂಜ್ಯ ಭಕ್ತಿರಸಾಮೃತ ಸ್ವಾಮಿ ಮಹಾರಾಜರು ಮಾಹಿತಿ ನೀಡಿದರು.
’ಬೆಳಗಾವಿಯವರ ಉತ್ಸವ’ ಎಂದು ಗುರುತಿಸಿಕೊಂಡಿರುವ ಈ ರಥಯಾತ್ರೆಯು ಇದು 28ನೇ ವರ್ಷವಾಗಿದ್ದು, ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಈ ರಥಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಇದಕ್ಕಾಗಿ ಇಸ್ಕಾನ್ ಬೆಳಗಾವಿ ವತಿಯಿಂದ ಒಂದು ಸಮಿತಿಯನ್ನು ಆಯೋಜಿಸಲಾಗಿದ್ದು, ಈ ಸಮಿತಿಯು ಎರಡು ದಿನಗಳ ಕಾಲ ನಡೆಯುವ ರಥಯಾತ್ರೆಯನ್ನು ಯಶಸ್ವಿಯಾಗಿ ನಡೆಸಲು ಶ್ರಮಿಸುತ್ತಿದೆ.
ಈ ರಥಯಾತ್ರೆಯಲ್ಲಿ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜನವರಿ 24 ರಂದು ರಥಯಾತ್ರೆ ನಡೆದ ನಂತರ, ಆ ದಿನ ಮತ್ತು ಜನವರಿ 25 ರಂದು ದೇವಾಲಯದ ಆವರಣದಲ್ಲಿ ನಿರ್ಮಿಸಲಾಗುವ ಶಾಮಿಯಾನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಈ ರಥಯಾತ್ರೆಯಲ್ಲಿ ಇಸ್ಕಾನ್ ಚಳುವಳಿಯ ಅನೇಕ ಹಿರಿಯ ಸನ್ಯಾಸಿಗಳು ಭಾಗವಹಿಸಲಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 