ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರನ್ನು ಗುರುತಿಸಿ ದಂಡ
Identify and fine those who litter in public places
ಲೋಕದರ್ಶನ ವರದಿ
ದಾಂಡೇಲಿ 18 : ದಾಂಡೇಲಿ ನಗರಸಭೆಯ ಪೌರಾಯುಕ್ತರಾದ ವಿವೇಕ್ ಬನ್ನೆಯವರು ಉದ್ದೇಶಪೂರ್ವಕವಾಗಿ ಕಸ ಎಸೆಯುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀರುವ ಹಿನ್ನೆಲೆಯಲ್ಲಿ ಆರೋಗ್ಯ ನೀರೀಕ್ಷಕರ ತಂಡ ಈಗ ಹದ್ದಿನ ಕಣ್ಣಿಟ್ಟು ಪರೀಶೀಲನೆ ನಡೆಸುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರನ್ನು ಗುರುತಿಸಿ ದಂಡ ವಿಧಿಸುವ ಕಾರ್ಯ ಮುಂದುವರೆಯಲಿದೆ. ಎಂದು ತಿಳಿದು ಬಂದಿದೆ. ಈಗಾಗಲೇ ಎಚ್ಚರಿಕೆ ನೀಡಿದಾಗಲೂ ಕಸ ಎಸೆಯುತ್ತಿರುವವರಿಗೆ ನೋಟಿಸು ನೀಡಿ ದಂಡ ವಿಧಿಸಲಾಗಿದೆ. ಇದುವರೆಗೂ 7500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ದಂಡ ನೀಡಲು ನಿರಾಕರಿಸಿದ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲಿಸಿರುವದಾಗಿ ಮಾಹಿತಿ ನೀಡಿದ್ದಾರೆ. ಬರಲಿರುವ ದಿನಗಳಲ್ಲಿ ಯಾವುದೇ ಮುಲಾಜಿಲ್ಲದೇ ಕಸ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಲಾಗಿದೆ..
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 