ಆರ್ಥಿಕವಾಗಿ ದುರ್ಬಲರನ್ನು ಗುರುತಿಸಿ ಶಿಕ್ಷಣಕ್ಕೆ ನೆರವು ನೀಡಿ: ಜಗದೀಶ ಶೆಟ್ಟರ
Identify the economically weaker sections and provide assistance for education: Jagadish Shettar
ಆಲಮೇಲ 02 : ಬಣಜಿಗ ಸಮಾಜದ ಸಂಘಟನೆ ಬಲಿಷ್ಠವಾಗಬೇಕಾದರೆ ಸಮಾಜದ ಎಲ್ಲ ವರ್ಗದವರನ್ನು ಒಗ್ಗೂಡಿಸಿಕೊಂಡು ಶಿಕ್ಷಣ, ಉದ್ಯೋಗ ಹಾಗೂ ಸ್ವಾವಲಂಬನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ಹೇಳಿದರು. ಪಟ್ಟಣದ ವಿಶ್ವೇಶ್ವರ ದೇವಸ್ಥಾನದಲ್ಲಿ ನಡೆದ ತಾಲ್ಲೂಕು ಬಣಜಿಗ ಸಮಾಜದ ಸಮಾವೇಶವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಗುರುತಿಸಿ, ಅವರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡಬೇಕು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮೂಲಕ ಅವರನ್ನು ಉನ್ನತ ಸ್ಥಾನಗಳಿಗೆ ತಲುಪಿಸುವ ಜವಾಬ್ದಾರಿ ಸಮಾಜದ ಮೇಲಿದೆ. ಹಿರಿಯರ ಅನುಭವ ಮತ್ತು ಯುವಕರ ಶಕ್ತಿಯನ್ನು ಸಮರ್ಕವಾಗಿ ಬಳಸಿಕೊಂಡಾಗ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.
ಸಮಾಜದ ಸಂಘಟನೆ ಕೇವಲ ಚುನಾವಣೆ ಅಥವಾ ಸಮಾವೇಶಗಳಿಗೆ ಸೀಮಿತವಾಗದೆ, ವರ್ಷಪೂರ್ತಿ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸದಸ್ಯರಲ್ಲಿ ಸಹಕಾರ, ವಿಶ್ವಾಸ ಹಾಗೂ ಒಗ್ಗಟ್ಟನ್ನು ಬೆಳೆಸಬೇಕು. ಸಮಾಜದ ಪ್ರಗತಿಗಾಗಿ ಎಲ್ಲರೂ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದೇ ಕುಟುಂಬದಂತೆ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಯುವಕರು ಶಿಕ್ಷಣದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಮಹಿಳೆಯರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ಮೂಲಕ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಹೇಳಿದರು.
ಶಾಸಕ ಅಶೋಕ ಮನಗೂಳಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹಾಗೂ ಬಣಜಿಗ ಸಮಾಜ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ, ದೊಡ್ಡಪ್ಪಗೌಡ ಪಾಟೀಲ ಹಾಗೂ ಮಾಜಿ ಪರಿಷತ್ ಸದಸ್ಯ ಅರುಣ ಶಹಾಪುರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಂಕರಾರೂಢ ಸ್ವಾಮೀಜಿ, ಚಂದ್ರಶೇಖರ ಶ್ರೀಗಳು, ವಿರಕ್ತಮಠದ ಶ್ರೀಗಳು ಹಾಗೂ ರಾಂಪೂರಮಠದ ನಿತ್ಯಾನಂದ ಶಿವಯೋಗಿಗಳು ಸಾನ್ನಿಧ್ಯ ವಹಿಸಿದ್ದರು. ತಾಲ್ಲೂಕು ಅಧ್ಯಕ್ಷ ಸಿದ್ಧಲಿಂಗ ಸುಬೇದಾರ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಅಶೋಕ ಹಂಚಲಿ ಉಪನ್ಯಾಸ ನೀಡಿದರು. ಮಲ್ಲಿಕಾರ್ಜುನ ಜೋಗೂರ ಪ್ರಸ್ತಾವಿಕವಾಗಿ ಮಾತನಾಡಿದರು.
ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತಲಾ ರೂ2,000 ನಗದು ಬಹುಮಾನ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ನೂತನ ತಾಲ್ಲೂಕು, ಮಹಿಳಾ ಮತ್ತು ಯುವ ಘಟಕಗಳ ಪದಾಧಿಕಾರಿಗಳ ಪದಗ್ರಹಣ ನಡೆಯಿತು.
ಶಿವಶರಣ ಗುಂದಗಿ ಸ್ವಾಗತಿಸಿದರು. ಶ್ರೀಶೈಲ ಮಠಪತಿ ಕಾರ್ಯಕ್ರಮ ನಿರೂಪಿಸಿದರು. ಶಿವಾನಂದ ಮಾರ್ಸನಳ್ಳಿ ವಂದಿಸಿದರು. ಸಮಾವೇಶದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ರೂಪಕಗಳು ಗಮನ ಸೆಳೆದವು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 