ಬೆಂಗಳೂರು 19: ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಅವಶ್ಯವೆಂದರೆ ತನಿಖೆ ಅನಿವಾರ್ಯ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಶ್ರೀಗಳ ಅಕಾಲಿಕ ನಿಧನ ಧಾಮರ್ಿಕ ಕ್ಷೇತ್ರದಲ್ಲಿ ಅಪಾರ ನಷ್ಟವನ್ನುಂಟುಮಾಡಿದೆ. ಅವರ ಸಾವಿನ ಬಗ್ಗೆ ಕೇಳಿಬರುತ್ತಿರುವ ಅನುಮಾನಗಳಿಗೆ ಅವಶ್ಯವೆಂದರೆ ತನಿಖೆ ಅನಿವಾರ್ಯ ಎಂದು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಶಿರೂರು ಶ್ರೀಗಳ ಆಕಸ್ಮಿಕ ಸಾವು ನೋವು ತಂದಿದೆ. ಅವರ ಸಾವಿನ ಸಂಶಯದ ಬಗ್ಗೆ ನಮಗೆ ಈವರೆಗೆ ಯಾವುದೇ ಸಕರ್ಾರದ ಮಟ್ಟದಲ್ಲಿ ಅಧಿಕೃತ ಮಾಹಿತಿ ಬಂದಿಲ್ಲ, ಬಂದರೆ ತನಿಖೆಗೆ ವಹಿಸುವ ಕುರಿತು ತೀಮರ್ಾನಿಸಲಾಗುವುದು ಎಂದರು.
ಉಡುಪಿಯ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ದೈವಾಧೀನರಾಗಿರುವುದು ಮನಸ್ಸಿಗೆ ಅತೀವ ನೋವು ತಂದಿದೆ. ಜನರ ಜೊತೆ ಸಾಮಾನ್ಯರಂತೆ ಬೆರೆಯುತ್ತಿದ್ದ ಹಾಗೂ ಶ್ರೀಕೃಷ್ಣನ ಸೇವೆಯಲ್ಲಿ ಅಪಾರ ಶ್ರದ್ಧೆ ಹೊಂದಿದ್ದ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾಥರ್ಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಸಹ ಸಂತಾಪ ಸೂಚಿಸಿದ್ದಾರೆ.