ಈಗ ಸಚಿನ್ ಆಡಿದ್ದರೆ ಲಕ್ಷಕ್ಕೂ ಅಧಿಕ ರನ್ ಕಲೆಹಾಕುತ್ತಿದ್ದರು:ಅಖ್ತರ್
ನವದೆಹಲಿ, ಮೇ 19,ಸಚಿನ್ ತೆಂಡೂಲ್ಕರ್ ಮತ್ತು ಭಾರತ ತಂಡದ ಹಾಲಿ ನಾಯಕ ವಿರಾಟ್ ಕೊಹ್ಲಿ ನಡುವೆ ಹೋಲಿಕೆ ಮಾಡುವುದು ಕಿಂಚಿತ್ತೂ ನ್ಯಾಯಯುತವಾದುದ್ದಲ್ಲ ಎಂದು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೊಯೇಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.ಕಳೆದ ಕೆಲ ವರ್ಷಗಳಿಂದ ಅದ್ಭುತವಾಗಿ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವ ಮೂಲಕ ಕಿಂಗ್ ಕೊಹ್ಲಿಯಾಗಿ ಹೊರಹೊಮ್ಮಿರುವ ವಿರಾಟ್, ಬ್ಯಾಟಿಂಗ್‌ನಲ್ಲಿ ತೆಂಡೂಲ್ಕರ್ ನಿರ್ಮಿಸಿದ್ದ ಹಲವು ದಾಖಲೆಗಳನ್ನು ಮುರಿದಿದ್ದಾರೆ.
ಇನ್ನು ಕೆಲವೇ ವರ್ಷಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಸಚಿನ್ ಬಾರಿಸಿರುವ 49 ಶತಕಗಳ ವಿಶ್ವ ದಾಖಲೆಯನ್ನೂ ಕೊಹ್ಲಿ ಮುರಿಯುವುದು ಬಹುತೇಕ ಖಾತ್ರಿಯಾದಂತಿದೆ.ದಿಲ್ಲಿ ಮೂಲದ ಬಲಗೈ ಬ್ಯಾಟ್ಸ್‌ಮನ್ ವಿರಾಟ್ ಸದ್ಯ ಟೆಸ್ಟ್, ಒಡಿಐ ಮತ್ತು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 50+ ಬ್ಯಾಟಿಂಗ್ ಸರಾಸರಿ ಹೊಂದಿರುವ ಏಕೈಕ ಬ್ಯಾಟ್ಸ್‌ಮನ್.ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ತಂಡದ ಪರ ಬರೋಬ್ಬರಿ 24 ವರ್ಷಗಳ ಕಾಲ ಸೇವೆ ಸಲ್ಲಿಸಿದ ಲಿಟ್ಲ್ ಮಾಸ್ಟರ್, ಈಗಿನ ಕಾಲಘಟ್ಟದಲ್ಲಿ ಏನಾದರೂ ಬ್ಯಾಟಿಂಗ್ ಮಾಡಿದ್ದರೆ 1.30 ಲಕ್ಷಕ್ಕೂ ಅಧಿಕ ರನ್‌ಗಳನ್ನು ಕಲೆಹಾಕುತ್ತಿದ್ದರು ಎಂದು ರಾವಲ್ಪಿಂಡಿ ಎಕ್ಸ್‌ಪ್ರೆಸ್ ಖ್ಯಾತಿಯ ಮಾಜಿ ವೇಗಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಂದಹಾಗೆ ವಾಸ್ತವದಲ್ಲಿ ಸಚಿನ್ 664 ಅಂತಾರಾಷ್ಟ್ರೀಯ ಪಂದ್ಯಗಳಿಂದ 34 ಸಾವಿರಕ್ಕೂ ಹೆಚ್ಚು ರನ್‌ಗಳನ್ನು ಬಾರಿದ್ದಾರೆ. ಸಚಿನ್ ಆಡಿದ್ದು ಕ್ರಿಕೆಟ್ ಜಗತ್ತಿನ ಅತ್ಯಂತ ಕಠಿಣ ಕಾಲಘಟ್ಟದಲ್ಲಿ ಎಂದು ಅಖ್ತರ್ ಬಣ್ಣಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 