ಒಂದು ಜೆಎನ್ ಯು ಹತ್ತಿಕ್ಕಿದರೆ ನೂರು ಜೆ ಎನ್ ಯು ಸಿಡಿದೇಳುತ್ತವೆ: ಸಸಿಕಾಂತ್ ಸೆಂಥಿಲ್
ಕಲಬುರ್ಗಿ, ಜ 7 , ಕೇಂದ್ರ ಸರ್ಕಾರ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯವನ್ನು ಹತ್ತಿಕ್ಕಲು ಹೊರಟಿದೆ ಎಂದು ಆರೋಪಿಸಿರುವ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್, ಇದೇ ಪರಿಪಾಠ ಮುಂದುವರಿದಲ್ಲಿ ನೂರು ವಿ.ವಿ.ಗಳ ವಿದ್ಯಾರ್ಥಿಗಳು ಸಿಡಿದೇಳುತ್ತಾರೆ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಎಚ್ಚರಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಜನಗಳೇ ಸ್ವಯಂ ಪ್ರೇರಿತರಾಗಿ ಬೀದಿಗಿಳಿದಿದ್ದಾರೆ. ಇದರಿಂದ ಹತಾಶವಾದ ಕೇಂದ್ರ ಸರ್ಕಾರ ಬುಲೆಟ್ಟಿನ ಮೂಲಕ ತಡೆಯಲು ಹೊರಟಿದೆ. ಇದು ಅಪಾಯಕಾರಿಯಾದುದು. ಎಲ್ಲರೂ ಇದರ ವಿರುದ್ಧ ಹೋರಾಟ ನಡೆಸಬೇಕಿದೆ ಎಂದರು.
ರಾಷ್ಟ್ರೀಯ ಪೌರತ್ವ ನೋಂದಣಿಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲ್ಲೆಯಲ್ಲಿ ಜನರ ದಿಕ್ಕು ತಪ್ಪಿಸಲು ಸರ್ಕಾರ ಎನ್ ಆರ್ ಸಿ ಬದಲು ಎನ್ ಪಿ ಆರ್ ಜಾರಿಗೆ ತಂದಿದೆ. ಇದನ್ನು ಗೃಹ ಇಲಾಖೆ ಮೇಲ್ವಿಚಾರಣೆಯಲ್ಲಿ ನಡೆಸುತ್ತಿದೆ. ಸಿಎಎಯಿಂದ ಯಾರ ಪೌರತ್ವವನ್ನು ಕಸಿಯುವ ಉದ್ದೇಶವಿಲ್ಲ ಎಂಬುದು ಹಸಿ ಸುಳ್ಳು. ಇದರಿಂದ ಮುಸ್ಲಿಮರಷ್ಟೇ ಅಲ್ಲ ಎಲ್ಲರೂ ಪೌರತ್ವವನ್ನು ಸಾಬೀತುಪಡಿಸಬೇಕಾಗುತ್ತದೆ. ನಿರುದ್ಯೋಗ, ಆರ್ಥಿಕ ಹಿಂಜರಿತದಂತಹ ಸಮಸ್ಯೆಗಳು ದೇಶವನ್ನು ಕಾಡುತ್ತಿರುವುದು ಈ ಪ್ರಕ್ರಿಯೆ ಅನಿವಾರ್ಯವಿದೆಯೇ ಎಂದು ಪ್ರಶ್ನಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 