ಬೇಡವಾದ ನವಜಾತ ಶಿಶು ಕಂಡುಬಂದಲ್ಲಿ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಒಪ್ಪಿಸಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ
If an unwanted newborn baby is found, hand it over to the Government Special Adoption Agency: Distri
ಬೇಡವಾದ ನವಜಾತ ಶಿಶು ಕಂಡುಬಂದಲ್ಲಿ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಒಪ್ಪಿಸಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ
ಬಳ್ಳಾರಿ 06: ಬೇಡವಾದ ಮತ್ತು ಸಾರ್ವಜನಿಕ ಸ್ಥಳದಲ್ಲಿ ನವಜಾತ ಶಿಶು ಕಂಡುಬಂದಲ್ಲಿ ಅಂತಹ ಮಕ್ಕಳನ್ನು ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಒಪ್ಪಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಯಾವುದೇ ಕಾರಣದಿಂದ ತಮಗೆ ಜನಿಸಿದ ನವಜಾತ ಶಿಶುಗಳು, ಅನಾಥ, ಪರಿತ್ಯಕ್ತ ಮಗುವು ತಮಗೆ ಬೇಡವಾದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ಮಾಹಿತಿ ನೀಡಿದರೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಗುವನ್ನು ಸ್ವೀಕರಿಸಿ, ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ದಾಖಲು ಮಾಡುತ್ತಾರೆ.
ಇಲ್ಲವೇ ಬಳ್ಳಾರಿ ನಗರದ ಕಂಟೋನ್ ಮೆಂಟ್ ಪ್ರದೇಶದ ಶಾಂತಿಧಾಮ ಆವರಣದ ಸರ್ಕಾರಿ ವಿಶೇಷ ದತ್ತು ಸಂಸ್ಥೆ, ಇಲ್ಲಿಗೆ ಒಪ್ಪಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.ಈ ಪ್ರಕ್ರಿಯೆಯಲ್ಲಿ ನವಜಾತ ಮಗುವಿನ ತಾಯಿ/ಪೋಷಕರಿಗೆ ಯಾವುದೇ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಸಹ ಯಾವುದೇ ಭಯ ಆತಂಕವಿಲ್ಲದೇ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ಬೇಡವಾದ ಮಕ್ಕಳನ್ನು ಒಪ್ಪಿಸಬೇಕು.
ಸಾರ್ವಜನಿಕರು ಯಾವುದೇ ಕಾರಣಕ್ಕೂ ಮಕ್ಕಳನ್ನು ಕಸದ ಬುಟ್ಟಿಯಲ್ಲಿ, ರಸ್ತೆ ಬದಿಯಲ್ಲಿ, ತಿಪ್ಪೆ ಗುಂಡಿಯಲ್ಲಿ ಹಾಕುವುದರ ಮೂಲಕ ಮಕ್ಕಳ ಸಾವಿಗೆ ಕಾರಣರಾಗಬಾರದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅ.07 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮಬಳ್ಳಾರಿ 06:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಅ.07 ರಂದು ಬೆಳಿಗ್ಗೆ 11 ಗಂಟೆಗೆ ನಗರದ ನಲ್ಲಚೆರವು ಪ್ರದೇಶದ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮ ಏರಿ್ಡಸಲಾಗಿದೆ.
ವೇದಿಕೆ ಕಾರ್ಯಕ್ರಮವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸುವರು.ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಬಳ್ಳಾರಿ ಸಂಸದರಾದ ಈ.ತುಕಾರಾಂ, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಬಳ್ಳಾರಿ ನಗರ ನಾರಾ ಭರತ್ ರೆಡ್ಡಿ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಸಮಾಜದ ಹಿರಿಯ ಮುತ್ಸದ್ದಿ ಜಿ.ರುದ್ರ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಹೊಸಪೇಟೆಯ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ವೀರಭದ್ರ್ಪ ತಂಬ್ರಳ್ಳಿ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು.*ಪುಷ್ಪಾರ್ಚನೆ:*
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 09 ಗಂಟೆಗೆ ನಗರದ ಎಸ್.ಪಿ ವೃತ್ತದ ಬಳಿಯ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಲಾಗುವುದು.*ಮೆರವಣಿಗೆ:*ನಂತರ ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾಪು) ಪದವಿಪೂರ್ವ ಕಾಲೇಜು ಮೈದಾನದಿಂದ ಭವ್ಯ ಮೆರವಣಿಗೆ ನಡೆಯಲಿದೆ.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್‌ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಾಲ್ಮೀಕಿ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಅ.10 ರಂದು ಬೃಹತ್ ‘ಪರಿಸರ ಜಾಗೃತಿ’ ಕಾರ್ಯಕ್ರಮಬಳ್ಳಾರಿ 06: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಸುವರ್ಣ ಮಹೋತ್ಸವದ ಅಂಗವಾಗಿ ಜಿಲ್ಲಾ ಕೇಂದ್ರದಲ್ಲಿ ಅ.09 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ಬೃಹತ್ ‘ಪರಿಸರ ಜಾಗೃತಿ’ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಿ ಅ.10 ರಂದು ಬೆಳಿಗ್ಗೆ 09.30 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾಪು) ಪದವಿಪೂರ್ವ ಕಾಲೇಜು ಮೈದಾನದಲ್ಲಿ ಏರಿ್ಡಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಟಿ.ಎಂ.ಸಿದ್ದೇಶ್ವರ ಬಾಬು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 