ಬೆಂಗಳೂರಿಗೆ ಬೆಣ್ಣೆ ಕರ್ನಾಟಕ್ಕೆ ಸುಣ್ಣ ವಿದ್ಯುತ್ ಸಂಪರ್ಕ ಹಾಗೂ ನೀರಿನ ಸಂಪರ್ಕ ಬಗೆ ಹರಿಯದಿದ್ದರೆ ಅ.27 ಕ್ಕೆ ಜೈಲು ಬರೋ ಚಳುವಳಿ : ಕೆಂಗನಾಳ
If electricity and water connections are not provided to Bengaluru, then movement to jail on October
ಲೋಕದರ್ಶನ ವರದಿ
ಬೆಂಗಳೂರಿಗೆ ಬೆಣ್ಣೆ ಕರ್ನಾಟಕ್ಕೆ ಸುಣ್ಣ ವಿದ್ಯುತ್ ಸಂಪರ್ಕ ಹಾಗೂ ನೀರಿನ ಸಂಪರ್ಕ ಬಗೆ ಹರಿಯದಿದ್ದರೆ ಅ.27 ಕ್ಕೆ ಜೈಲು ಬರೋ ಚಳುವಳಿ : ಕೆಂಗನಾಳ
ವಿಜಯಪುರ : ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ 2024 ರ ಕಲಂ 241 (7) ಅನ್ವಯ 5 ಮಹಾನಗರ ಪಾಲಿಕೆಗಳಿಗೆ ಸೀಮಿತಮಾಡಿ 1200 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸುತ್ತಿರುವ ನೆಲಮಹಡಿ ಸೇರಿದಂತೆ 2 ಅಂತಸ್ತಿನಿಂದ ಮೂರು ಅಂತಸ್ಥಿನ ವರೆಗೆಗಿನ ವಸತಿ ಕಟ್ಟಡಳಿಗೆ ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಜನರಿಗೆ ವಿದ್ಯುತ್ ಸಂಪರ್ಕ ಹಾಗೂ ಕುಡಿಯುವ ನೀರಿನ ಸಂಪರ್ಕ ಪಡೆಯಲು ಅನುಕೂಲ ಮಾಡಿಕೊಟ್ಟಿದೆ ಇದು ಸ್ವಾಗತಾರ್ಹ.
ಆದರೆ ರಾಜ್ಯದ ಇತರ ಜಿಲ್ಲೆಗಳಲ್ಲಿ ನಮ್ಮ ರೈತ ಭಾರತ ಪಕ್ಷ ಸೇರಿದಂತೆ ಅನೇಕ ಸಂಘಟನೆಗಳು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ವಿದ್ಯುತ್ ಸಂಪರ್ಕ ನೀಡಿ ಎಂದು ಅನೇಕ ಹೋರಾಟಗಳನ್ನು ಮಾಡಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೆ ಅದನ್ನು ಈಡೇರಿಸದೇ ರಾಜಕೀಯ ಉದ್ದೇಶಕ್ಕಾಗಿ ಕೇವಲ ಬೆಂಗಳೂರು ಮಹಾನಗರಕ್ಕೆ ಮಾತ್ರ ಹೊಸ ವಿದ್ಯುತ್ ಸಂಪರ್ಕ ಹಾಗೂ ಕುಡಿಯುವ ನೀರಿನ ಸಂಪರ್ಕಕ್ಕೆ ಆದೇಶ ಮಾಡುವ ಮೂಲಕ ಒಂದು ಕಣ್ಣಿಗೆ (ಬೆಂಗಳೂರು) ಬೆಣ್ಣೆ ಇನ್ನೊಂದು ಕಣ್ಣಿಗೆ (ರಾಜ್ಯದ ಇತರ ಭಾಗ)ಕ್ಕೆ ಸುಣ್ಣ ಎಂಬಂತೆ ವರ್ತಿಸುತ್ತಿರುವುದು ಖಂಡನೀಯವಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಕೇವಲ ಬೆಂಗಳೂರು ನಗರಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಆಗಿದ್ದಾರೆ. ಅವರಿಗೆ ರಾಜ್ಯದ ಜನರ ಹಿತಕಾಪಾಡುವ ಯಾವುದೇ ಉದ್ದೇಶವಿಲ್ಲ. ಉತ್ತರ ಕರ್ನಾಟಕದ ಜನರಿಗೆ ನಿರಂತರವಾಗಿ ಒಂದಿಲ್ಲ ಒಂದು ತೊಂದರೆ ಕೊಡುತ್ತಿದ್ದಾರೆ ಎಂದು ಅಸಮಾಧಾನ ಹೊರ ಹಾಕಿರುವ ಅವರು ಬೆಂಗಳೂರು ನಗರ ಹೊರತು ಪಡಿಸಿದ ಕರ್ನಾಟಕದ ಎಲ್ಲ ಭಾಗದ ಜನ ಪ್ರತಿನಿಧಿಗಳು ರಾಜ್ಯಕ್ಕೆ ಆಗುತ್ತಿರುವ ವಿದ್ಯುತ್ ಸಂಪರ್ಕದ ತೊಂದರೆಯನ್ನು ಬಗೆ ಹರಿಸಬೇಕು. ಇಲ್ಲವಾದಲ್ಲಿ ರಾಜ್ಯದ ಎಲ್ಲಾ ಭಾಗದ ಸಚಿವರು ಹಾಗೂ ಶಾಸಕರುಗಳು ರಾಜೀನಾಮೆ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸಮಸ್ಯೆ ಬಗೆ ಹರಿಯದಿದ್ದರೆ ಅಕ್ಟೋಬರ್ 27 ರಂದು ಹುಬ್ಬಳ್ಳಿ ವಿದ್ಯುತ್ ಸಂಪರ್ಕ ಕಛೇರಿಗೆ ಸಾರ್ವಜನಿಕರೊಂದಿಗೆ ಸೇರಿ ಮುತ್ತಿಗೆ ಹಾಕಲಾಗವುದು ಇದಕ್ಕೂ ಮಣಿಯದಿದ್ದರೆ ಜೈಲ ಬರೋ ಚಳುವಳಿ ಹಮ್ಮಿಕೊಳ್ಳುವ ಮೂಲಕ ತಕ್ಕಪಾಠ ಕಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 