ಒಳ್ಳೆಯ ಸಂಸ್ಕಾರ ನೀಡಿದರೇ ಉತ್ತಮ ಪ್ರಜೆಯಾಗುತ್ತಾರೆ: ಪ್ರಾಚಾರ್ಯ ಫಯಾಜ
If given good education, they will become good citizens: Principal Fayaz
ಶಿಗ್ಗಾವಿ 15 : ಮಕ್ಕಳಿಗೆ ಮನೆಯಲ್ಲಿ ಹಾಗೂ ಶಾಲೆಯಲ್ಲಿ ಒಳ್ಳೆಯ ಸಂಸ್ಕಾರ ನೀಡಿದರೇ ಉತ್ತಮ ಪ್ರಜೆಯಾಗುತ್ತಾರೆ ಎಂದು ಪ್ರಾಚಾರ್ಯ ಫಯಾಜ ಅಹ್ಮದ ತಹಶೀಲ್ದಾರ ಹೇಳಿದರು. ತಾಲೂಕಿನ ಹಿರೇಮಣಕಟ್ಟಿ ಗ್ರಾಮದ ಎಸ್.ಎಫ್.ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ವಿಧ್ಯಾರ್ಥಿಗಳ ಅಭ್ಯುದಯವೇ ನಮ್ಮ ಮುಖ್ಯ ಉದ್ದೇಶ ಅಲ್ಲದೇ ಎಲ್ಲಾ ಸರ್ಕಾರದ ಯೋಜನೆಗಳು ನಮ್ಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಧ್ಯಾರ್ಥಿಗಳಿಗೆ ಸಿಗುವ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಸಂಸ್ಥೆ ಹಾಗೂ ಶಿಕ್ಷಕ ವೃಂದ ಶ್ರಮಿಸುತ್ತಿದೆ ಎಂದರು.
ಅಧ್ಯಕ್ಷತೆವಹಿಸಿ ಶಿವಾನಂದ ಬೆಣಕಣ್ಣನವರ ಮಾತನಾಡಿ ಶಿಕ್ಷಣ ಸಂಸ್ಥೆಗಳು ನಿರ್ವಹಣೆ ಮಾಡುವುದು ಬಹಳ ಕಷ್ಟ ಏಕೆಂದರೆ ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತದೆ ಆದರೆ ನಮ್ಮ ಶಿಕ್ಷಣ ಸಂಸ್ಥೆ ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು. ಸಂಸ್ಥೆ ನಿರ್ದೇಶಕ ಫಯಾಜ ಅಹ್ಮದ ಸವಣೂರ ಮಾತನಾಡಿ ಇಂದಿನ ವಿಧ್ಯಾರ್ಥಿಗಳು ಹೆಚ್ಚಿನ ಸಂಖೈಯಲ್ಲಿ ದುಶ್ಚಟ್ಟಕ್ಕೆ ಬಲಿಯಾಗುತ್ತಿದ್ದಾರೆ ಕಾರಣ ತಂದೆ ತಾಯಿಗಳು ಅವರ ಬಗ್ಗೆ ಜಾಗೃತಿವಹಿಸಬೇಕು ಎಂದು ಪಾಲಕರಿಗೆ ಕಿವಿ ಮಾತು ಹೇಳಿದರು. ಕಾರ್ಯಕ್ರಮದ ಸಾನಿಧ್ಯವಹಿಸಿ ಹಿರೇಮಣಕಟ್ಟಿ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆರ್ಶಿವದಿಸಿದರು. ನೂತನ ವಸತಿ ನಿಲಯದ ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಸಯ್ಯ ಹಿರೇಮಠ, ಭೂದಾನಿ ಮುಕ್ತುಮಸಾಬ ತಹಶಿಲ್ದಾರ, ಮುದಿಗೌಡ್ರಗೋಟಗೋಡಿ, ಹುತ್ತನಗೌಡ ನಿಂಗನಗೌಡ್ರ, ಹನಮಂತಪ್ಪ ವಾಲ್ಮೀಕಿ, ಚನ್ನಪ್ಪ ಹುಲಸೋಗಿ, ಪಾರುಕ್ ಮುಲ್ಲಾ, ಶಿವರಾಜ ಹುಲಸೋಗಿ, ಶಂಕ್ರ್ಪ ಕಮಡೊಳ್ಳಿ ಸೇರಿದಂತೆ ಶಾಲೆಯ ಶಿಕ್ಷಕ ವೃಂದದವರು ಸೇರಿದಂತೆ ಪಾಲಕರು, ಪೋಷಕರು, ಮಕ್ಕಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 