ಪ್ರಕೃತಿ, ಪರಿಸರ ನಾಶವಾದರೆ ಇಡೀ ಮನುಕುಲ ನಾಶ-ಸಚಿವ ಈಶ್ವರ್ ಖಂಡ್ರೆ
If nature and environment are destroyed, the entire mankind will be destroyed - Minister Ishwar Khan
ಪ್ರಕೃತಿ, ಪರಿಸರ ನಾಶವಾದರೆ ಇಡೀ ಮನುಕುಲ ನಾಶ-ಸಚಿವ ಈಶ್ವರ್ ಖಂಡ್ರೆ
ಬಳ್ಳಾರಿ 10: ಪ್ರಪಂಚದ ವಿವಿಧೆಡೆ ಇತ್ತೀಚೆಗೆ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗಮನಿಸಿದರೆ ಮನುಷ್ಯನಿಗೆ ಪರಿಸರ ಅವಶ್ಯಕವಾಗಿದೆ. ಆದರೆ ಪರಿಸರಕ್ಕೆ ಮನುಷ್ಯನ ಅಗತ್ಯವಿಲ್ಲ, ಪ್ರಕೃತಿ ಪರಿಸರ ನಾಶವಾದರೆ ಇಡೀ ಮಾನವಕುಲವೇ ನಾಶವಾಗುತ್ತದೆ. ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಮತ್ತು ಮುಂದಿನ ಪೀಳಿಗೆ ಬದುಕಲು ಸಾಧ್ಯ. ನಾವೆಲ್ಲರೂ ಜಾಗರೂಕರಾಗಬೇಕಿದೆ ಎಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರಣ್ಯ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ಏರಿ್ಡಸಿದ್ದ ‘ಸುವರ್ಣ ಮಹೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹವಾಮಾನ ವೈಪರಿತ್ಯಗಳಿಂದ ಬರ, ಸುನಾಮಿ, ಅತಿವೃಷ್ಟಿ, ಅನಾವೃಷ್ಟಿಗಳನ್ನು ಕಾಣುತ್ತಿದ್ದೇವೆ. ಜಾಗತಿಕ ತಾಪಮಾನ ಹೆಚ್ಚಾಗುತ್ತಿರುವುದರಿಂದ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಅದರಲ್ಲಿ ಜಲ ಮಾಲಿನ್ಯ, ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯಗಳಿಂದ ಅನೇಕ ರೀತಿಯ ಹಾನಿಯಾಗುತ್ತಿವೆ ಎಂದು ತಿಳಿಸಿದರು.
ಪರಿಸರ ಸಂರಕ್ಷಣೆಗೆ ಕೆಲಸ ಮಾಡಿದವರು ಇಂದಿರಾಗಾಂಧಿ: ದೇಶದಲ್ಲಿ ಮೊದಲ ಬಾರಿಗೆ ಪರಿಸರ ಸಂರಕ್ಷಣೆಗೆ ಕೆಲಸ ಮಾಡಿದವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ. ಅವರು ದೇಶದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿ ಮೊದಲ ಬಾರಿಗೆ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಬಗ್ಗೆ ಮಾತನಾಡಿದರು. 1972ರಲ್ಲಿ ವಿಶ್ವಸಂಸ್ಥೆಯ ಸ್ಟಾಕ್‌ಹೋಮ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಇಂದಿರಾ ಗಾಂಧಿ ಅವರು ಪರಿಸರವನ್ನು ಉಳಿಸಿಕೊಳ್ಳಬೇಕಾದ ಮಹತ್ವವನ್ನು ಜಗತ್ತಿಗೆ ತಿಳಿಸಿಕೊಟ್ಟರು. ನಂತರ 1974ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧೀನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿದರು. ಈಗ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 50 ವರ್ಷ ಪೂರೈಸಿದ್ದು ಇದೀಗ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಎಸ್.ಎಸ್.ಲಿಂಗರಾಜ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಉಪವಿಭಾಗಾಧಿಕಾರಿ ಪಿ.ಪ್ರಮೋದ್, ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಟಿ.ಎಂ.ಸಿದ್ದೇಶ್ವರ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಾಲಿಕೆ ಸದಸ್ಯರು, ಜಿಲ್ಲೆಯ ವಿವಿಧ ಕೈಗಾರಿಕೆಗಳ ಕೈಗಾರಿಕೋದ್ಯಮಿಗಳು, ಕಾರ್ಮಿಕರು, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 