ಜನಸಂಖ್ಯೆ ಮಿತಿ ಮೀರಿದರೆ ದೇಶದ ಅಭಿವೃದ್ಧಿಗೆ ಮಾರಕ: ಪಾತ್ರೋಟ
If population exceeds the limit, it will be detrimental to the country's development: Patrota
ವಿಶ್ವ ಜನಸಂಖ್ಯೆ ದಿನಾಚರಣೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ
ಧಾರವಾಡ, 19 ; ಜನಸಂಖ್ಯೆ ದೇಶದ ಅಭಿವೃದ್ಧಿಗೆ ಒಂದು ಅತ್ಯಮೂಲ್ಯ ಸಂಪನ್ಮೂಲ, ಆದರೆ ಜನಸಂಖ್ಯೆ ಮಿತಿ ಮೀರಿದರೆ ದೇಶದ ಅಭಿವೃದ್ಧಿಗೆ ಮಾರಕ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ ಹೇಳಿದರು. ಹೆಬಸೂರ ಗ್ರಾಮದ ಸರಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬ್ಯಾಹಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯೆ ದಿನಾಚರಣೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಜಗತ್ತಿನ ಜನಸಂಖ್ಯೆ 7.9 ಶತಕೋಟಿ ಇದೆ. 2025 ಕ್ಕೆ 800 ಶತಕೋಟಿ ದಾಟುವ ಸಾಧ್ಯತೆ ಇದೆ. ದೇಶದಲ್ಲಿ ಪ್ರತಿವರ್ಷ 1.55 ಕೋಟಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಪ್ರತಿ ವರ್ಷ 7.75 ಲಕ್ಷದಷ್ಟು ಜನಸಂಖ್ಯೆ ಹೆಚ್ಚುವರಿಯಾಗುತ್ತಿದೆ. ಈ ವೇಗದಲ್ಲಿ ಜನಸಂಖ್ಯೆ ಬೆಳೆಯುತ್ತಿದ್ದರೆ ಭಾರತವು ಮುಂದಿನ 35 ವರ್ಷಗಳಲ್ಲಿ 200 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಲಿದೆ ಎಂದರು. ಈ ವರ್ಷ “ಯೋಜಿತ ಪೋಷಕತ್ವವನ್ನು ಸರಿಯಾದ ಕಾಲಮಿತಿಯಲ್ಲಿ ಸೂಕ್ತ ಅಂತರದಲ್ಲಿ ಗರ್ಭಧಾರಣೆ ಹೊಂದುವುದರಿಂದ ಪಡೆಯಬಹುದು”. ಎಂಬ ಘೋಷವಾಕ್ಯದಡಿಯಲ್ಲಿ ಜನಸಂಖ್ಯಾ ದಿನ ಹಮ್ಮಿಕೊಳ್ಳಲಾಗಿದೆ. ಕುಟುಂಬ ಕಲ್ಯಾಣ ಯೋಜನೆಗಳ ಮೂಲಕ ಸಾಕಷ್ಟು ಜನಗಳನ್ನು ತಡೆಗಟ್ಟಲಾಗಿದೆ. ಆದರೂ, ಬಡತನ, ಅಜ್ಞಾನ, ಮಾಹಿತಿ ಕೊರತೆ ಮೂಡನಂಬಿಕೆ, ಲಿಂಗ ಅಸಮಾನತೆ ಮುಂತಾದ ಕಾರಣಗಳಿಂದಾಗಿ ಜನಸಂಖ್ಯೆ ಇನ್ನು ಹೆಚ್ಚುತ್ತಿದೆ. ಎಂದು ಹೇಳಿದರು.
ವಿಶ್ವ ಜನಸಂಖ್ಯಾ ದಿನವನ್ನು ಪ್ರತಿ ವರ್ಷ ಜುಲೈ-11 ರಂದು ಆಚರಿಸಲಾಗುತ್ತದೆ. ಈ ದಿನವನ್ನು ಜನಸಂಖ್ಯೆ ಸಮಸ್ಯೆಗಳು ಮತ್ತು ಅದರ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಆಚರಿಸಲಾಗುತ್ತಿದೆ. ಜನಸಂಖ್ಯೆ ಬೆಳವಣಿಗೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು, ಕುಟುಂಬ ಯೋಜನೆ ಮತ್ತು ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವುದು. ಮತ್ತು ಜನರ ಆರೋಗ್ಯ ಸುಧಾರಿಸುವುದು ವಿಶ್ವ ಜನಸಂಖ್ಯೆ ದಿನದ ಪ್ರಮುಖ ಉದ್ದೇಶವಾಗಿದೆ. ಎಂದು ಹೇಳಿದರು.
ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಎಮ್. ಎನ್. ಅಗಡಿ ಅವರು ಮಾತನಾಡಿ ಜಗತ್ತಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಿಸುವುದು ಪ್ರಸ್ತುತ ದಿನಗಳಲ್ಲಿ ಅತಿದೊಡ್ಡ ಸವಾಲಾಗಿದೆ. ಮೂರು ದಶಕಗಳಿಂದ ವಿಶ್ವ ಜನಸಂಖ್ಯೆ ದಿನ ಆಚರಿಸುತ್ತ ಬರಲಾಗುತ್ತಿದೆ. ವಿಶ್ವ ಜನಸಂಖ್ಯೆ ದಿನವನ್ನು ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ದಿನ ಆಚರಿಸಲಾಗತ್ತಿದೆ ಎನ್ನುತ್ತಾ, ಜನರಲ್ಲಿ ಲೈಂಗಿಕತೆ, ಸಂತಾನೋತ್ಪತ್ತಿ ಮತ್ತು ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿದೆ. ಜನಸಂಖ್ಯೆ ಏರಿಕೆಗೆ ಲಿಂಗ ಅಸಮಾನತೆ, ಬಾಲ್ಯ ವಿವಾಹ, ಆರೋಗ್ಯದ ಹಕ್ಕು, ಮಗುವಿನ ಆರೋಗ್ಯದ ಮೇಲಿನ ಪರಿಣಾಮಗಳು, ಕುಟುಂಬ ಯೋಜನೆ ಇಲ್ಲದೇ ಇರುವುದು, ಮಾನವ ಹಕ್ಕುಗಳು ಪ್ರಮುಖ ಕಾರಣಗಳಾಗಿವೆ. ದೇಶದಲ್ಲಿ ಸ್ಥಿರವಾಗಿ ಜನಸಂಖ್ಯೆ ಹೆಚ್ಚುತ್ತಿದೆ. ಜನಸಂಖ್ಯೆ ಹೆಚ್ಚಳದಿಂದ ಆರ್ಥಿಕ ಬೆಳವಣಿಗೆಗೆ, ದೇಶದ ಪ್ರಗತಿಗೆ ಅವಕಾಶವಿದ್ದರೂ, ಇದು ವಸತಿ, ಆರೋಗ್ಯ, ಮೂಲಸೌಕರ್ಯ, ಪರಿಸರ, ಅಭಿವೃದ್ಧಿ ಮತ್ತು ಮಾನವ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ. ಇನ್ನೂ ಜನಸಂಖ್ಯೆ ಹೆಚ್ಚಳದಿಂದ ಉದ್ಯೋಗಾವಕಾಶಗಳ ಕೊರತೆ ಉಂಟಾದರೆ ಅದರಿಂದ ಬಡತನ, ನಿರುದ್ಯೋಗದ ಸಮಸ್ಯೆಯೂ ಹೆಚ್ಚಾಗುತ್ತದೆ. ಹೀಗೆ ವೇಗವಾಗಿ ಹೆಚ್ಚುತ್ತಿರುವ ಜನಸಂಖ್ಯೆಯಿಂದ, ಹೆಚ್ಚುತ್ತಿರುವ ಸವಾಲುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರಂತರವಾಗಿ ಮಾಡುತ್ತಿದೆ. ಎಂದು ಹೇಳಿದರು.
ಸರಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶಾಕೀರ ಹುಸೇನ ಮುಜಾವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಇಂದು ಯುವಜನತೆ ಜನಸಂಖ್ಯಾ ಹೆಚ್ಚಳದಿಂದ ಆಗುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸುತ್ತಾ ಜನಸಂಖ್ಯೆ ಸ್ಥಿರತೆ ಕಾಪಾಡಲು ಕುಟುಂಬ ಕಲ್ಯಾಣ ಕಾರ್ಯಕ್ರಮ ಯೋಜನೆಗಳ ಕುರಿತಾಗಿ ಯುವ ಜನತೆಯಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಕುಟುಂಬದ ಜನಸಂಖ್ಯೆ ಹೆಚ್ಚಾದರೆ ಕುಟುಂಬ ಆರ್ಥಿಕ ತೊಂದರೆ ಅನುಭವಿಸಬೇಕಾಗುತ್ತದೆ. ದೇಶದ ಜನಸಂಖ್ಯೆ ಮಿತಿಮೀರಿದರೆ ನಿರುದ್ಯೋಗ ಸಮಸ್ಯೆ, ವಸತಿ ಸಮಸ್ಯೆ, ಆರೋಗ್ಯ ಸಮಸ್ಯೆ ಹೀಗೆ ವಿವಿಧ ಸಮಸ್ಯೆಗಳು ಹೆಚ್ಚುತ್ತಾ ಹೋಗುತ್ತವೆ. ಹೀಗಾಗಿ ಕುಟುಂಬ ಕಲ್ಯಾಣ ಯೋಜನೆಯ ಸದುಪಯೋಗ ಪಡೆದುಕೊಂಡು ಜನಸಂಖ್ಯೆ ನಿಯಂತ್ರಿಸಲು ಇಡೀ ಸಮುದಾಯ ಮುಂದಾಗಬೇಕು ಎಂದರು.
ಉಪನ್ಯಾಸಕರಾದ ಎಮ್.ವಾಯ್ ಹುಬ್ಬಳ್ಳಿ ಇವರು ಸ್ವಾಗತಿಸಿ, ನಿರೂಪಿಸಿ ವಂದಿಸಿದರು.
ಕಾರ್ಯಕ್ರದಮಲ್ಲಿ ಉಮಾ ಡೊಳ್ಳಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಬ್ಯಾಹಟ್ಟಿ, ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 