ನವದೆಹಲಿ, ಏ ೧6, ಕೊರೊನಾ ವೈರಸ್ ಸೋಂಕು ವ್ಯಾಪಿಸುವುದನ್ನು ತಡೆಯಲು ಲಾಕ್ ಡೌನ್ ಒಂದೇ ಪರಿಹಾರವಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. “ಲಾಕ್ ಡೌನ್ ಪರಿಹಾರವಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅದು ನಿಜವೇ ಆಗಿದ್ದರೆ, ಕಾಂಗ್ರೆಸ್ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಲಾಕ್ ಡೌನ್ ಏಕೆ ಪಾಲಿಸುತ್ತಿದ್ದಾರೆ..? ಎಂದು ಬಿ.ಎಲ್. ಸಂತೋಷ್ ಟ್ವೀಟರ್ ಮೂಲಕ ಗುರುವಾರ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.ವಿಡಿಯೋ ಕಾನ್ಫರೆನ್ಸ್ ಮೂಲಕ ಗುರುವಾರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಕೊರೊನಾವೈರಾಣು ಸೋಂಕು ಎದುರಿಸಲು ಲಾಕ್ ಡೌನ್ ಒಂದೇ ಪರಿಹಾರವಲ್ಲ, ಯೋಜಿತ ರೀತಿಯಲ್ಲಿ ವ್ಯಾಪಕವಾಗಿ ಕೊರೊನಾ ಪರೀಕ್ಷೆಗಳನ್ನು ನಡೆಸುವುದು ಇದಕ್ಕೇ ಸೂಕ್ತ ಪರಿಹಾರ ಎಂದು ಸಲಹೆ ನೀಡಿದ್ದರು. ದೇಶದಲ್ಲಿ ಪ್ರಸ್ತುತ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಕೂಡಲೇ ಪ್ರಮಾಣವನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಿ ಬೇಕು ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.