ಬ್ಯಾಡಗಿ30: ತಾಲೂಕಿನಲ್ಲಿ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಬೇಜವಾಬ್ದಾರಿತನ ತೋರಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ಸ್ಥಳೀಯ ತಾಲೂಕ ಪಂಚಾಯತ ಸಭಾಭವನದಲ್ಲಿ ಕೋವಿಡ್-19 ರಡಿಯಲ್ಲಿ ನರೇಗಾ ಯೋಜನೆಯ ಅನುಷ್ಠಾನ ಕುರಿತಂತೆ ಜರುಗಿದ ಪಿಡಿಓ ಹಾಗೂ ಇಂಜನಿಯರ್ಗಳ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಪ್ರತಿಯೊಂದು ಕಾಮಗಾರಿಗೆ ಕೂಲಿ ಸಾಮಗ್ರಿಗಳ ಅನುಪಾತವನ್ನು ಶೇಕಡಾ 60/40 ರಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ಸಾಮಗ್ರಿ ವೆಚ್ಚದ ಪ್ರಮಾಣವು ಶೇಕಡಾ 40ನ್ನು ಮೀರುವಂತಿಲ್ಲ. ಈ ಬಗ್ಗೆ ನಿಯಮ ಉಲ್ಲಂಘಿಸಿದರೆ ಸಾಮಗ್ರಿಯ ಅನುದಾನದ ಜೊತೆ ಕೂಲಿ ಕಾಮರ್ಿಕರ ಅನುದಾನದ ಬಿಡುಗಡೆಯೂ ನಿಲುಗಡೆಯಾಗುವ ಸಾಧ್ಯತೆ ಇರುವ ಕಾರಣ ಪಿಡಿಓ'ಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಮಾನವ ಕೆಲಸಕ್ಕೆ ಆದ್ಯತೆ ನೀಡಿ..!!
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಮಾನವ ಕೆಲಸಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ ತಾಲೂಕಿನ ಕೂಲಿ ಕಾಮರ್ಿಕರಿಗೆ ನಿರಂತರವಾಗಿ ಕೆಲಸ ಸಿಗುವಂತೆ ಕ್ರಮ ವಹಿಸಬೇಕು. ಇಂಗುಗುಂಡಿ, ನೀರುಗಾಲುವೆ, ಕೆರೆ ಹೂಳೆತ್ತುವ ಕಾಮಗಾರಿ, ಬದು ನಿಮರ್ಾಣ, ಸ್ಮಶಾನ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನ ಕೈಗೊಳ್ಳಬೇಕು ಎಂದು ಸೂಚಿಸಿದರಲ್ಲದೆ ಈಗಾಗಲೇ ತಾಲೂಕಿನ ಘಾಳಪೂಜಿ, ಚಿಕ್ಕಬಾಸೂರ, ಹಿರೇಹಳ್ಳಿ, ಕುಮ್ಮುರು ಹಾಗೂ ಕೆರವಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಆದರೆ ಇನ್ನುಳಿದ ಗ್ರಾಮ ಪಂಚಾಯತಿಗಳಲ್ಲಿ ನಿರೀಕ್ಷೆಗೆ ತಕ್ಕಂತೆ ಯೋಜನೆಯಡಿ ಕಾಮಗಾರಿಗಳು ಅನುಷ್ಠಾನವಾಗುತ್ತಿಲ್ಲ. ಈ ಕುರಿತು ಪರಿಶೀಲಿಸಿ ನರೇಗಾ ಯೋಜನೆಯ ಸಮಗ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ತಾ.ಪಂ. ಅಧಿಕಾರಿಗೆ ಸೂಚಿಸಿದರು.
ತಾ.ಪಂ. ಕಾರ್ಯ ನಿವರ್ಾಹಕ ಅಧಿಕಾರಿ ಅಬಿದ್ ಗದ್ಯಾಳ ಮಾತನಾಡಿ, ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಕೃಷಿ ಇಲಾಖೆಯ ಸಹಯೋಗದೊಂದಿಗೆ ಜಲಾಮೃತ ಯೋಜನೆಯ ಮೂಲಕ ರೈತರ ಜಮೀನಿನಲ್ಲಿ ಬದು ನಿಮರ್ಾಣ ಕಾಮಗಾರಿಗಳನ್ನು ಮಾಡಲಾಗುತ್ತಿದ್ದು, ಪ್ರತಿ ಎಕರೆಗೆ ಹತ್ತು ಸಾವಿರ ರೂಗಳನ್ನು ನಿಗಧಿ ಪಡಿಸಿದ್ದು, ಸಣ್ಣ ಮತ್ತು ಅತಿಸಣ್ಣ ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಈ ಬಗ್ಗೆ ಆಯಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅಭಿವೃದ್ದಿ ಅಧಿಕಾರಿಗಳನ್ನು ಅಥವಾ ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪಕರ್ಿಸಬಹುದೆಂದು ತಿಳಿಸಿದರಲ್ಲದೆ ಜಲಾಮೃತ ಯೋಜನೆಯಡಿ ಪ್ರತಿ ಗ್ರಾಮಕ್ಕೆ ಕನಿಷ್ಠ 20 ಎಕರೆ ಬದು ನಿಮರ್ಾಣ ಕಾಮಗಾರಿಯನ್ನು ಕೈಗೊಳ್ಳಲು ಮಾತ್ರ ಅವಕಾಶವಿದ್ದು, ನರೇಗಾ ಯೋಜನೆಯಡಿ ಬದು ನಿಮರ್ಾಣ ಮಾಡಲು ನಿದರ್ಿಷ್ಟ ಗುರಿ ಇಲ್ಲದ ಕಾರಣ ಹೆಚ್ಚಿನ ಬದು ನಿಮರ್ಾಣ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದು ವಿವರಿಸಿದರು. ಕುಮ್ಮೂರು ಮತ್ತು ಕೆರವಡಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ನೀಲಪ್ಪ ಕಜ್ಜರಿ ಹಾಗೂ ಪ್ರದೀಪ ಗಣೇಶ್ಕರ್ ಮಾತನಾಡಿ, ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ವಿನೂತನ ಪದ್ಧತಿಯನ್ನು ಅಳವಡಿಸಿಕೊಂಡು ಇಂಗು ಗುಂಡಿಗಳನ್ನು ನಿಮರ್ಿಸಲು ತರಬೇತಿಯನ್ನು ಪಡೆದಿದ್ದು, ಅದರ ಪ್ರಕಾರ ಕಾಮಗಾರಿ ಅನುಷ್ಠಾನಗೊಂಡರೆ ಶೇ. 80 ರಷ್ಟು ಮಳೆಯ ನೀರು ಮೇಲೆ ಇಂಗುವ ಸಾಧ್ಯತೆಯಿದೆ. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಅಧಿಕಾರಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರಕಿದೆ ಎಂದು ಸಭೆಯಲ್ಲಿ ಶಾಸಕರ ಗಮನಕ್ಕೆ ತಂದರು.
ಸಭೆಯಲ್ಲಿ ತಾ.ಪಂ. ಅಧ್ಯಕ್ಷೆ ಸವಿತಾ ಸುತ್ತಕೋಟಿ, ಉಪಾಧ್ಯಕ್ಷೆ ಶಾಂತಮ್ಮ ದೇಸಾಯಿ, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲನಗೌಡ ಕರೇಗೌಡ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇಂಜನಿಯರ್ಗಳು ಉಪಸ್ಥಿತರಿದ್ದರು.