ಪ್ರತಿದಿನ ಯೋಗ ಮಾಡಿದರೆ ರೋಗವಿಲ್ಲ : ರಮೇಶ ಅಳಗುಂಡಿ
If you do yoga every day, you will not get sick: Ramesh Alagundi
ಲೋಕದರ್ಶನ ವರದಿ
ವರದಿ: ಅಡಿವೇಶ ಮುಧೋಳ
ಬೆಟಗೇರಿ 21 : ಯೋಗ ಭಾರತೀಯ ಪ್ರಾಚೀನ ಪರಂಪರೆಯ ಅತ್ಯಮೂಲ್ಯ ಕೊಡುಗೆಯಾಗಿದೆ. ಪ್ರತಿ ದಿನ ಪ್ರತಿಯೊಬ್ಬರೂ ಯೋಗ ಮಾಡಿ ಆರೋಗ್ಯವಾಗಿರಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜೂ.21ರಂದು ನಡೆದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತ ದೇಶ ವಿಶ್ವಕ್ಕೆ ಯೋಗದ ಕೊಡುಗೆ ನೀಡಿದೆ. ಪ್ರತಿದಿನ ಯೋಗ ಮಾಡಿದರೆ ರೋಗವಿಲ್ಲ. ಮನುಷ್ಯನಿಗೆ ಯೋಗದಿಂದ ದೊರಕುವ ವಿವಿಧ ಪ್ರಯೋಜನಗಳ ಕುರಿತು ಶಾಲಾ ಮಕ್ಕಳಿಗೆ ತಿಳಿಸಿದರು.
ಸುಮಾರು ಗಂಟೆಗಳ ಕಾಲ ಸ್ಥಳೀಯ ಪ್ರೌಢ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ವರ್ಗದವರು ವಿವಿಧ ಭಂಗಿಯ ಯೋಗಗಳನ್ನು ಮಾಡಿದ ಬಳಿಕ ಎಲ್ಲರಿಗೂ ಸಿಹಿ ವಿತರಿಸಲಾಯಿತು.
ಶಾಲೆಯ ಶಿಕ್ಷಕರಾದ ಪ್ರಕಾಶ ಕುರಬೇಟ, ರಾಕೇಶ ನಡೋಣಿ, ಶುಭಾ.ಬಿ., ಈರಣ್ಣ ಪಟಗುಂದಿ, ಈಶ್ವರ ಮುನವಳ್ಳಿ, ಗಣಪತಿ ಭಾಗೋಜಿ, ವೈ.ಎಂ. ವಗ್ಗರ, ಭಾಗ್ಯಶ್ರೀ ನಾಯಕ, ಶುಭಾ.ಬಿ., ಮಲ್ಹಾರಿ ಪೋಳ ಸೇರಿದಂತೆ ಸಹ ಶಿಕ್ಷಕರು, ಅತಿಥಿ ಶಿಕ್ಷಕರು, ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 