ಸಮ ಭಾವ ಇದ್ದರೆ ಜೀವನದಲ್ಲಿ ಸಾಧನೆ ಸಾಧ್ಯ: ಸಾರಂಗ ಶ್ರೀಗಳು
If you have a balanced attitude, you can achieve success in life: Saranga Sri
ಸಿಂದಗಿ 29: ಹಿರಿಯರ ಮಾರ್ಗದರ್ಶನ ಮುಖೇನ ನಾವೆಲ್ಲ ಕಾರ್ಯನಿರ್ವಹಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ದಿ.ಎಂ.ಸಿ.ಮನಗೂಳಿ ಅವರ ಸುಪುತ್ರ ಶಾಸಕ ಅಶೋಕ ಮನಗೂಳಿ ಅವರೇ ನಿದರ್ಶನ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.
ಸಿಂದಗಿ ಪಟ್ಟಣದ ಎಚ್.ಜಿ.ಕಾಲೇಜಿನ ಮೈದಾನದಲ್ಲಿ ಕರ್ನಾಟಕ ವಾಲಿಬಾಲ್ ಸಂಸ್ಥೆ ಹಾಗೂ ಎಂ.ಸಿ.ಮನಗೂಳಿ ಪ್ರತಿಷ್ಠಾನದ ವತಿಯಿಂದ ಎಂ.ಸಿ.ಮನಗೂಳಿ ಅವರ 5ನೇ ಪುಣ್ಯಸ್ಮರಣೆ ನಿಮಿತ್ತ ಹಮ್ಮಿಕೊಂಡ ಹೊನಲು ಬೆಳಕಿನ ವಾಲಿಬಾಲ್ ಭಗೀರಥ ಕಪ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ದಿ.ಎಂ.ಸಿ.ಮನಗೂಳಿ ಅವರು ಕಡು ಬಡುತನದಲ್ಲಿ ಹುಟ್ಟಿದರು ಜನಸೇವೆ ಮಾಡಬೇಕೆಂಬ ಬಯಕೆ ಅವರಲ್ಲಿ ಬಹಳಷ್ಟಿತ್ತು. ಅದರ ಫಲವಾಗಿ ಅವರು ಸಚಿವರಾಗಿ ಆಯ್ಕೆಯಾಗಿ ಜಿಲ್ಲೆಗೆ ಅನೇಕ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಒಬ್ಬ ದೀಮಂತ ವ್ಯಕ್ತಿಯಾಗಿದ್ದರು. ಅವರ ಹಾದಿಯಲ್ಲಿಯೇ ತಂದೆಗೆ ತಕ್ಕ ಮಗನಂತೆಶಾಸಕ ಅಶೋಕ ಮನಗೂಳಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ತಂದೆಯ ಕನಸುಗಳನ್ನು ಸಾಕಾರಗೊಳಿಸುತ್ತಿದ್ದಾರೆ. ಅವರ ಕಾರ್ಯ ಹೀಗೆ ಸಾಗಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ ಮನಗೂಳಿ ವಹಿಸಿದ್ದರು. ಜಿಪಂ ಮಾಜಿ ಉಪಾಧ್ಯಕ್ಷ ಮಲ್ಲಣ ಸಾಲಿ ವಾಲಿಬಾಲ್ ಮೈದಾನದ ಪೂಜೆಯನ್ನು ನೇರವೇರಿಸಿ ಮಾತನಾಡಿದರು. ಕರ್ನಾಟಕ ವಾಲಿಬಾಲ್ ಸಂಸ್ಥೆಯ ಪ್ರ.ಕಾರ್ಯದರ್ಶಿ ಲಕ್ಷ್ಮಿನಾರಾಯಣ, ಅಶೋಕ ವಾರದ ಮಾತನಾಡಿದರು. ಕಾರ್ಯಕ್ರಮದ ಸಾನಿಧ್ಯವನ್ನು ಸಾರಂಗಮಠದ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ರಾಂಪೂರ ಪಿಎ ಗ್ರಾಮದ ಆರೂಢಮಠದ ನಿತ್ಯಾನಂದ ಮಹಾರಾಜರು ವಹಿಸಿ ಆಶೀರ್ವಚನ ನೀಡಿದರು.
ಇದೇ ಸಂದರ್ಭದಲ್ಲಿ ಜಾನಪದ ಕಲಾವಿದ ಬಾಳು ಬೆಳಗುಂದಿ, ಬಾಲಾಜಿ ಪ್ರಭು, ರವಿಕುಮಾರ, ನಾಗೇಶ್ವರಾವ್, ಛಲಪತಿ, ಮಂಜುನಾಥ, ನಿವೃತ್ತ ದೈಹಿಕ ಉಪನ್ಯಾಸಕ ಕೆ.ಎಚ್.ಸೋಮಾಪುರ, ಎಚ್.ಎಂ.ಉತ್ನಾಳ, ಶಿವಪ್ಪಗೌಡ ಬಿರಾದಾರ, ಅಶೋಕ ವಾರದ, ಡಾ.ರವಿ ಗೋಲಾ, ಡಾ.ಅರವಿಂದ ಮನಗೂಳಿ, ಉಮೇಶ ಜೋಗುರ, ಪಂಡಿತ ಕುಲಕರ್ಣಿ, ಗುರಣ್ಣಗೌಡ ಪಾಟೀಲ, ಎಂ.ಎ.ಖತೀಬ, ಅಶೋಕ ಕೊಳಾರಿ, ಸೋಮನಗೌಡ ಬಿರಾದಾರ, ಕಲ್ಲಪ್ಪ ನಾಯ್ಕೋಡಿ, ಸಿದ್ದರಾಮ ಕಲ್ಲೂರ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಕ್ರೀಡಾಭಿಮಾನಿಗಳು ಹಾಗೂ ಮನಗೂಳಿ ಅವರ ಅಭಿಮಾನಿಗಳು ಇದ್ದರು. ಶಾಂತವೀರ ಪಟ್ಟಾಧ್ಯಕ್ಷರ ಕನ್ಯಾ ಪ್ರೌಢಶಾಲಾ ವಿದ್ಯಾರ್ಥಿಗಳು ನಾಡಗೀತೆಯನ್ನು ಹಾಡಿದರು. ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಸ್ವಾಗತಿಸಿದರು. ಉಪನ್ಯಾಸಕರ ಸಿದ್ದಲಿಂದ ಕಿಣಗಿ ನಿರೂಪಿಸಿ ವಂದಿಸಿದರು.
ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕದ 6 ತಂಡಗಳಾದ ಕರ್ನಾಟಕ ರಾಜ್ಯ ಪೊಲೀಸ್, ಬೆಂಗಳೂರಿನ ಎ.ಎಸ್.ಸಿ ಕರ್ನಾಟಕ ಪೋಸ್ಟಲ್, ಸ್ಪೋರ್ಟ್ ಹಾಸ್ಟೆಲ್, ಎಸ್‌ಡಿಎಂ ಉಜಿರೆ, ಹುಬ್ಬಳ್ಳಿಯ ಸೌತ್ ಸೆಂಟ್ರಲ್ ರೈಲ್ವೆ ಭಾಗವಹಿಸಿವೆ.
ಬಾಕ್ಸ್: ಮನಗೂಳಿ ಅವರನ್ನು ಸ್ಮರಣೆ ಮಾಡಿಕೊಳ್ಳುವ ಒಂದು ಅವರೂಪದ ಕಾರ್ಯಕ್ರಮವಿದು. ಸಮನಾಗಿ ನೋಡುವ ಭಾವ ಯಾರಲ್ಲಿರುತ್ತದೆಯೋ ಅವರು ಜೀವನದಲ್ಲಿ ಸಾಧನೆ ಮಾಡುತ್ತಾರೆ. ಮನಗೂಳಿ ಅವರು ಈ ನಾಡು ಕಂಡಂತಹ ಒಬ್ಬ ಶ್ರೇಷ್ಠ ರಾಜಕಾರಣಿ ಮತ್ತು ಸಮಾಜ ಚಿಂತಕ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 