ಕಪ್ಪಲಗುದ್ದಿಯಲ್ಲಿ ಆ.11ರಂದು ಇಳಿಜಾರು ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ
Ilajaru Lakshmi Devi Jatra Mahotsava at Kappalaguddi on August 11
ಪಾಲಬಾವಿ 07 : ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ಇಳಿಜಾರು ಲಕ್ಷ್ಮೀದೇವಿ ಜಾತ್ರಾ ಮಹೋತ್ಸವವು ಆ.11ರಂದು ಮಂಗಳವಾರ ಸಡಗರ ಸಂಭ್ರಮದಿಂದ ಜರುಗಲಿದೆ. ಜಾತ್ರೆಯ ಅಂಗವಾಗಿ ಮುಂಜಾನೆ 6 ಗಂಟೆಗೆ ದೇವಸ್ಥಾನದ ಅರ್ಚಕರಿಂದ ಲಕ್ಷ್ಮೀದೇವಿ ಹಾಗೂ ಕರ್ತೃ ಗದ್ದಿಗೆ ಅಭಿಷೇಕ ನೆರವೇರಲಿದೆ. ಬೆಳಿಗ್ಗೆ 9 ಗಂಟೆಗೆ ಪುರದೇವರಾದ ಹಾಲುಸಿದ್ದೇಶ್ವರರ ಪಲ್ಲಕ್ಕಿಯನ್ನು ಬರಮಾಡಿಕೊಳ್ಳಲಾಗುವುದು. ಬೆಳಿಗ್ಗೆ 10 ಗಂಟೆಗೆ ದೇವಸ್ಥಾನದ ಪ್ರಭಾ ಮಂಡಳದಲ್ಲಿ 101 ಸುಮಂಗಲಿಯರಿಗೆ ಉಡಿ ತುಂಬುವ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ದೇವಸ್ಥಾನದ ದಾಸೋಹ ಮಹಾಮನೆಯಲ್ಲಿ ಅನ್ನ ಸಂತರೆ್ಣ ನಡೆಯಲಿದೆ.
ಸತ್ಸಂಗ ಕಾರ್ಯಕ್ರಮದಲ್ಲಿ ಗುರುಮಠದ ಗುರುಲಿಂಗಯ್ಯ ಸ್ವಾಮೀಜಿ ಹಿರೇಮಠ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಇಂಚಗೇರಿ ಶ್ರೀಮಠದ ವೀರ ಸನ್ಯಾಸಿ ಶಶಿಕಾಂತ ಗುರೂಜಿ ಆಶೀರ್ವಚನ ನೀಡಲಿದ್ದಾರೆ. ಜಾತ್ರೆಯ ಪ್ರಮುಖ ಆಕರ್ಷಣೆಯಾಗಿ ಬೆಳಿಗ್ಗೆ 9 ಗಂಟೆಗೆ ಸುಪ್ರಸಿದ್ಧ ಡೊಳ್ಳಿನ ಪದಗಳ ಹಾಡುಗಾರಿಕೆ ನಡೆಯಲಿದೆ. ಅಥಣಿ ತಾಲೂಕಿನ ಮಾಯನಟ್ಟಿ ಗ್ರಾಮದ ಅಮೋಘ ಸಿದ್ದೇಶ್ವರ ಡೊಳ್ಳಿನ ಗಾಯನ ಸಂಘ ಹಾಗೂ ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ಮಾಳಿಂಗರಾಯ ಗಾಯನ ಸಂಘದ ಕಲಾವಿದರಿಂದ ಹರದೇಶಿ-ನಾಗೇಶಿ ಡೊಳ್ಳಿನ ಪದಗಳ ಗಾಯನ ಜರುಗಲಿದೆ ಎಂದು ಜಾತ್ರಾ ಕಮಿಟಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 