ಅಕ್ರಮ – ಸಕ್ರಮ ಯೋಜನೆ ಮೂಲಕ ಮೂರು ಸಾವಿರ ಕೋಟಿ ರೂ ಸಂಗ್ರಹಿಸುವ ಗುರಿ...!!!

ಬೆಂಗಳೂರು, ಏ 29, ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಪನ್ಮೂಲ ಸಂಗ್ರಹಕ್ಕಾಗಿ ತಿಣುಕಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಂಗಳೂರು ನಗರದಲ್ಲಿ ಅಕ್ರಮ – ಸಕ್ರಮ ಯೋಜನೆ ಜಾರಿಗೊಳಿಸಲು ಮುಂದಾಗಿದ್ದಾರೆ. ಬೆಂಗಳೂರು ನಗರದಲ್ಲಿ ಮೂರು ಸಾವಿರ ಕೋಟಿ ರೂ ಗೂ ಹೆಚ್ಚಿನ ಸಂಪನ್ಮೂಲ ಸಂಗ್ರಹಿಸುವ ಉದ್ದೇಶವನ್ನು ಯಡಿಯೂರಪ್ಪ ಗರಿ ನಿಗದಿಪಡಿಸಿದ್ದು, ಇದಕ್ಕಾಗಿ ಚಾಲನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಅಕ್ರಮ-ಸಕ್ರಮ ಯೋಜನೆ ಜಾರಿಗೊಳಿಸುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ಸಭೆ ನಡೆಸಿದರು. ಅಕ್ರಮ-ಸಕ್ರಮ ಯೋಜನೆ ಸಾಧಕ-ಬಾಧಕಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದು, ಈ ಸಂಬಂಧ ಎದುರಾಗಿರುವ ಕಾನೂನು ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಕಾನೂನು ಮತ್ತು ಸಂಸದೀಯ ವ್ಯಹಾರಗಳ ಸಚಿವ ಜೆ.ಸಿ. ಮಾಧು ಸ್ವಾಮಿ ಅವರಿಗೆ ಸೂಚಿಸಿದ್ದಾರೆ. ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ವಿ. ಸೋಮಣ್ಣ, ಎಸ್. ಸುರೇಶ್ ಕುಮಾರ್ ಹಾಗೂ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು.