ಅಕ್ರಮ ಗಾಂಜಾ ಮಾರಾಟ: ಪೊಲೀಸರ ದಾಳಿ, ಇಬ್ಬರ ಬಂಧನ
Illegal marijuana sale: Police raid, two arrested
ಬೆಳಗಾವಿ 12: ಅಕ್ರಮವಾಗಿ ಗಾಂಜಾ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ್ದಾರೆ.
ಬೆಳಗಾವಿ ತಾಲೂಕಿನ ಪೀರನವಾಡಿ ಪಾಟೀಲ ಗಲ್ಲಿ ನಿವಾಸಿ ರಾಘವೇಂದ್ರ ಯೋಗೇಶ ನಾಯರ(32) ವರ್ಷ, ಅನಗೋಳ ರಘುನಾಥ ಪೇಟ ನಿವಾಸಿ ದೀಪಕ ಯಶವಂತ ಪಾಟೀಲ(28) ಬಂಧಿತ ಆರೋಪಿಗಳಾಗಿದ್ದಾರೆ.
ಉದ್ಯಮಬಾಗ ಜೈನ್ ಇಂಜೀನೀಯರಿಂಗ್ ಕಾಲೇಜ ಹತ್ತಿರ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಗಾಂಜಾ ಮಾದಕ ಪದಾರ್ಥವನ್ನು ಅನಧಿಕೃತವಾಗಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉದ್ಯಮಬಾಗ ಠಾಣೆ ಪಿಎಸ್‌ಐ ಕಿರಣ ಸಿ ಹೊನಕಟ್ಟಿ ಹಾಗೂ ಸಿಬ್ಬಂದಿಯವರು ದಾಳಿ ಮಾಡಿದ್ದು, ಆರೋಪಿತರಿಂದ ರೂ. 32,000 ರೂ ಮೌಲ್ಯದ 1068 ಗ್ರಾಂ ಗಾಂಜಾ, ನಗದು ಹಣ 700 ರೂ, ಹಾಗೂ ಒಂದು ಮೋಟೊ ಕಂಪನಿ ಮೊಬೈಲ್ ಅಕಿಃ 15,000 ರೂ ಮೌಲ್ಯದ ವಸ್ತುಗಳನ್ನು ಜಪ ಮಾಡಿಕೊಂಡಿದ್ದಾರೆ.
ಈ ಕುರಿತು ಆರೋಪಿಗಳ ವಿರುದ್ಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ದಾಳಿ ಮಾಡಿ ಆರೋಪಿತರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿದ ಪಿಎಸ್‌ಐ ಹಾಗೂ ಸಿಬ್ಬಂದಿಯವರ ತಂಡದ ಕಾರ್ಯವನ್ನು ಪೊಲೀಸ್ ಆಯುಕ್ತರು, ಬೆಳಗಾವಿ ನಗರ ಹಾಗೂ ಡಿಸಿಪಿ ರವರುಗಳು ಶ್ಲಾಘಿಸಿರುತ್ತಾರೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 