ಬೆಂಗಳೂರು, ನ 6: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ಜಪ್ತಿ ಮಾಡಿದ್ದಾರೆ. ಲಾರಿಯಲ್ಲಿದ್ದ ಸುಮಾರು 14.5 ಟನ್ ಪಡಿತರ ಅಕ್ಕಿಯನ್ನು ರಾಂಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯಿಂದ ಬೆಂಗಳೂರಿಗೆ ಪಡಿತರ ಅಕ್ಕಿ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಲಾರಿ ಚಾಲಕ ಚಂದ್ರಶೇಖರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.