ಕುರುವತ್ತಿ ಬಳಿ ಅಕ್ರಮ ಮರಳು ದಂಧಗೆ ಕಡಿವಾಣ
Illegal sand mining busted near Kuruvathi
ಹೂವಿನಹಡಗಲಿ 01: ಅಕ್ರಮ ಮರಳು ದಂಧಗೆ ಕಡಿವಾಣಕ್ಕೆ ಇದೀಗ ತಾಲ್ಲೂಕಿನ ಕುರುವತ್ತಿಬಳಿ ಶನಿವಾರ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ದಾಳಿ ನಡೆಸಿ, ತುಂಗಭದ್ರಾ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳನ್ನು ವಶಪಡಿಸಿಕೊಂಡಿ-ದ್ದಾರೆ. ದಂಧೆಕೋರರು ನದಿ ತೀರದಲ್ಲಿ ಮರಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟಕ್ಕೆ ಕಳಿಸುತ್ತಿದ್ದ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲಿ ಸಂಗ್ರಹವಿದ್ದ ಮರಳನ್ನುಮೈಲಾರ ಪ್ರವಾಸಿ ಮಂದಿರ ಅವರಣಕ್ಕೆ ಸಾಗಣೆ ಮಾಡಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.ದಂಧೆಕೋರರು ಮರಳು ಸಾಗಣೆಗಾಗಿ ನದಿ ಪಾತ್ರದಲ್ಲಿ ಅನಧಿಕೃತವಾಗಿ ರಸ್ತೆ ನಿರ್ಮಿಸಿಕೊಂಡಿ-ರುವುದನ್ನು ಪತ್ತೆ ಹಚ್ಚಿದ ಅಧಿಕಾರಿಗಳು ಜೆಸಿಬಿ ಯಂತ್ರದಿಂದ ಕಂದಕ ತೋಡಿ ರಸ್ತೆಯನ್ನು ನಾಶಪಡಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಚಾಲಿತ ದಳದ ಕೀರ್ತಿ ಕುಮಾರ, ಭೂ ವಿಜ್ಞಾನಿ ಮಲ್ಲಯ್ಯ ಹಾಗೂ ಸಿಬ್ಬಂದಿ ದಾಳಿನಡೆಸಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 