ಕೃಷ್ಣಾ ನದಿಯಲ್ಲಿ ಎಗ್ಗಿಲ್ಲದೆ ಸಾಗಿದ ಅಕ್ರಮ ಮರಳುಗಾರಿಕೆ
Illegal sand mining continues unabated in the Krishna River
ಲೋಕದರ್ಶನ ವರದಿ,
ಜಮಖಂಡಿ 26: ಕೃಷ್ಣಾ ನದಿ ಸಂಪೂರ್ಣ ಬತ್ತಿದ ಹಿನ್ನೆಲೆಯಲ್ಲಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ದಂಧೆ ಎಗ್ಗಿಲದೆ ನಡೆಯುತ್ತಿದೆ. ಇದಕ್ಕೆ ಸಂಪೂರ್ಣವಾಗಿ ಅಕ್ರಮ ಮರಳುಗಾರಿಕೆ ದಂಧೆಕೋರರಿಗೆ ಕಂದಾಯ ಇಲಾಖೆ ಹಾಗೂ ಪೋಲಿಸ್ ಇಲಾಖೆಯ ಸಾಥ ನೀಡುತ್ತಿದ್ದಾರೆ ಎಂದು ಮೈಗೂರ ಗ್ರಾಮದ ಹೋರಾಟಗಾರ ಬಿ.ಜಿ.ಪಾಟೀಲ ಗಂಭೀರವಾಗಿ ಆರೋಪಿಸಿದ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.
ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ದಂದೆ ಬಲು ಜೋರಾಗಿ ನಡೆಯುವ ಜೊತೆಗೆ ಕೃಷ್ಣೆಯ ಒಡಲು ಒಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ದಂದೆಕೋರರ ಅಟ್ಟಹಾಸ ಮೀತಿಮಿರಿದೆ. ಮೈಗೂರ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ದಂದೆ ಎಗ್ಗಿಲದೆ ಸಾಗುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಸಂಪೂರ್ಣವಾದ ಮಾಹಿತಿ ಇರುತ್ತದೆ ಎಂದರು.
ಆದರೆ ಮೈಗೂರ ಗ್ರಾಮದ ಕೃಷ್ಣಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಬಗ್ಗೆ ನಿಖರ ಮಾಹಿತಿ ಮೇರೆಗೆ ತಡೆಯಲು ಹೋದ ಉಪವಿಭಾಗ ಅಧಿಕಾರಿ ಜೆಸಿಬಿಯನ್ನು ಬಂಧಿಸಲು ಪೋಲಿಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಪೋಲಿಸರು ಜೆಸಿಬಿಯನ್ನು ಠಾಣೆಗೆ ತಂದ ಕೆಲವೇ ಗಂಟೆಗಳಲ್ಲಿ ಯಾವುದೇ ಅಕ್ರಮ ದಂದೆಯಲ್ಲಿ ಪಾಲುದಾರಿಕೆ ಇರುವುದಿಲ್ಲ ಎಂದು ಪೋಲಿಸರು ಅದನ್ನು ಮರಳಿ ಕಳಿಸಿರುತ್ತಾರೆ ಎಂದು ಆರೋಪಿಸಿದರು.
ಪೋಲಿಸ್ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸಿದರೆ ಅವರು ಉಪವಿಭಾಗ ಅಧಿಕಾರಿ ಅವರು ಜೆಸಿಬಿಯನ್ನು ಬಂಧಿಸಿ ಎಂದು ಸೂಚನೆ ನೀಡಿದರು. ಮತ್ತೆ ಮರಳಿ ಜೆಸಿಬಿಯನ್ನು ಬಿಡು ಎಂದು ಸೂಚನೆ ನೀಡಿದ್ದಾರೆ ಎಂದು ಹೇಳುತ್ತಾರೆ. ಹೀಗೆ ಒಬ್ಬರ ಮೇಲೊಬ್ಬರು ಹಾರಿಕೆ ಉತ್ತರವನ್ನು ನೀಡಿ ಜಾರಿಕೊಳುತ್ತಿದ್ದಾರೆ. ಅಕ್ರಮ ಮರಳುಗಾರಿಕ್ಕೆ ದಂಧೆಕೋರರ ಜೊತೆ ಅಧಿಕಾರಿಗಳು ಶ್ಯಾಮೀಲು ಇದ್ದಾರೆ ಎಂಬ ಅನುಮಾನ ಕಾಡುತ್ತಿದೆ. ಹೀಗೆ ಇರುವಾಗ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಹೇಗೆ ಸಾಧ್ಯ ಎಂದು ಆಕ್ರೋಶವ್ಯಕ್ತಪಡಿಸಿದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 