ಅಕ್ರಮವಾಗಿ ಮಣ್ಣು ಸಾಗಣೆ : ಡಂಪರ್ ವಾಹನಗಳನ್ನು ತಡೆದ ರೈತರು
Illegal soil transportation: Farmers stop dumper vehicles
ಕೊಲ್ಹಾರ 03 : ಸಮೀಪದ ಕೃಷ್ಣಾ ನದಿಯಿಂದ ಅಕ್ರಮವಾಗಿ ಮಣ್ಣು ಸಾಗಣೆ ನಡೆಯುತ್ತಿರುವುದನ್ನು ಖಂಡಿಸಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 218ರ ಕೊಲ್ಹಾರ ಸೇತುವೆ ಪಕ್ಕದ ತೋಟದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಡಂಪರ್ ವಾಹನಗಳನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜರುಗಿದೆ. ಡಂಪರ್ಗಳಲ್ಲಿ ನಿಯಮ ಮೀರಿ ಮಣ್ಣು ತುಂಬಿ ಸಾಗಿಸಲಾಗುತ್ತಿದೆ ರಸ್ತೆ ನೀರು ಹೊಡಯಲ್ಲ ಇದರಿಂದ ವಾಹನ ಸಂಚಾರದಿಂದ ಧೂಳು ಬೆಳೆಗಳ ಮೇಲೆ ಕುಳಿತು ಬೆಳೆ ಹಾನಿಯಾಗುತ್ತಿದೆ.
ತಾಲೂಕಿನ ಯಾವ ಒಬ್ಬ ಅಧಿಕಾರಿಗಳು ಇದರ ಬಗ್ಗೆ ಕ್ರಮಕ್ಕೆ ಮುಂದಾಗುತ್ತಿಲ್ಲಾ ಜನರ ಸುರಕ್ಷತೆಗೆ ಮುಂದಾಗ ಬೇಕಿದ್ದ ಅಧಿಕಾರಿಗಳು ಮೌನ ವಹಿಸಿದ್ದು ಯಾಕೆ ಕೂಡಲೇ ಕೃಷ್ಣಾ ನದಿಯಲ್ಲಿ ಅಕ್ರಮವಾಗಿ ರಾತ್ರಿ ಹಗಲು ಮಣ್ಣು ಸಾಗಿಸುವ ವಾಹನಗಳಿಗೆ ತಕ್ಷಣ ಕಡಿವಾಣ ಹಾಕಬೇಕು ಇರದೆ ಹೋದರೆ ರಾಷ್ಟ್ರೀಯ ಹೆದ್ದಾರಿ ತಡೆದು ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ ರೈತರಾದ ಮಲ್ಲಪ್ಪ ಗಾಣಿಗೇರ ಮತ್ತು ಲಕ್ಷ್ಮಣ್ ಅಂಬಿಗೇರ ಮಾತನಾಡಿ, “ನದಿಯಲ್ಲಿ ನೀರು ಇಳಿಮುಖವಾಗುತ್ತಿದ್ದಂತೆಯೇ ಮಣ್ಣು ಮಾಫಿಯಾ ಚಟುವಟಿಕೆಗಳು ಹೆಚ್ಚಾಗುತ್ತಿವೆ.
ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಡಂಪರ್ಗಳ ಅತಿಯಾದ ಓಡಾಟದಿಂದ ರಸ್ತೆ ಸಂಪೂರ್ಣ ಹಾಳಾಗಿದ್ದು, ಧೂಳಿನ ಮಬ್ಬಿನಿಂದ ವಾಹನ ಸವಾರರಿಗೆ ರಸ್ತೆ ಕಾಣದ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆ 5ರಿಂದ ರಾತ್ರಿ 10ರವರೆಗೆ ನಿರಂತರ ವಾಹನ ಸಂಚಾರದಿಂದ ವಾಯು ಮಾಲಿನ್ಯ ಹೆಚ್ಚಾಗಿ ಸಾರ್ವಜನಿಕರು, ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.ಪ್ರತಿಭಟನೆಯಲ್ಲಿ ನಾಗಪ್ಪ ಏಳಗಂಟಿ, ಮಲ್ಲಯ್ಯ ಮಠಪತಿ, ಸುರೇಶ್ ಉಪ್ಪಾರ, ಬಸವರಾಜ್ ಗಾಣಿಗೇರ್, ಪರಮಾನಂದ ಬರಗಿ ಸೇರಿದಂತೆ ಅನೇಕ ರೈತರು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 