ಬೆಂಗಳೂರು,ಡಿ
26, ರಾಜ್ಯದಲ್ಲಿ ಗಂಭೀರ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ತಕ್ಷಣವೇ ಬಗೆಹರಿಸುವಂತೆ ಎಂದು
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸಸೌಧದ ಸಭಾಂಗಣದಲ್ಲಿ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ
ಪಂಚಾಯತ್ ಗಳ ಸಿಇಓ ಹಾಗೂ ಹಿರಿಯ ಅಧಿಕಾರಿಗಳೊಂದಿಗೆಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂದರ್ಭದಲ್ಲಿ
ಈ ಆದೇಶ ನೀಡಿದರು. ಗ್ರಾಮೀಣ ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಮಾಡುವ ಹಾಗೂ ಶುದ್ಧ ಕುಡಿಯುವ
ನೀರಿನ ಘಟಕಗಳ ನಿರ್ವಹಣೆ ಕುರಿತು ತಕ್ಷಣವೇ ಕ್ರಮಕೈಗೊಳ್ಳಬೇಕು. ಸ್ಥಗಿತವಾಗಿರುವ ಘಟಕಗಳ ದುರಸ್ತಿ
ಕಾರ್ಯ ಶೀಘ್ರ ಮಾಡುವಂತೆ ಆದೇಶಿಸಿದರು. ಪ್ರಮುಖವಾಗಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು ಮುಂತಾದ ಜಿಲ್ಲೆಗಳಲ್ಲಿ ತೀವ್ರ ತೊಂದರೆ ಇದೆ. ಒಂದು ತಿಂಗಳ ಕಾಲಾವಧಿಯಲ್ಲಿ ದುರಸ್ಥಿತಿ
ಕಾಮಗಾರಿ ಮುಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.