ವಲಸೆ ಕಾರ್ಮಿಕರಿಗೆ ಸಿಗಲಿದೆ ಇನ್ನೂ 2 ಲಕ್ಷರೂ. ಹೆಚ್ಚು ಪರಿಹಾರ
ನವದೆಹಲಿ, ಮೇ 13, ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಹರಿದು ಸಾವನ್ನಪ್ಪಿದ ಮಧ್ಯಪ್ರದೇಶದ 16 ವಲಸೆ ಕಾರ್ಮಿಕರ ಕುಟುಂಬಗಳ ಸದಸ್ಯರುಗಳಿಗೆ ಮಾನವೀಯ ನೆಲೆಯಲ್ಲಿ ತಲಾ 2 ಲಕ್ಷ ರೂಪಾಯಿ ಹೆಚ್ಚಿನ ಪರಿಹಾರ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಈ ಪರಿಹಾರ ಮೊತ್ತ ಮೃತ ಸಂತ್ರಸ್ತರ ಕುಟುಂಬಗಳಿಗೆ ತಲುಪಿಸಲಾಗುವುದು . ಇನ್ನು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ದೊರೆಯಲಿದೆ.ಮೃತರ ವಿವರಗಳು ಹಾಗೂ ಪರಿಹಾರಕ್ಕಾಗಿ ಅಗತ್ಯವಿರುವ ಅನುದಾನದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಪ್ರಧಾನಿ ಕಾರ್ಯಾಲಯ ರೈಲ್ವೆ ಇಲಾಖೆಯನ್ನು ಕೇಳಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 