ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗಳ ಅನುಷ್ಠಾನ ಪಾರದರ್ಶಕವಾಗಿರಲಿ: ಎಚ್.ಎಂ. ರೇವಣ್ಣ
Implementation of Gruha Lakshmi and Gruha Jyothi schemes should be transparent: H.M. Revanna
ಗದಗ 17: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ’ಗೃಹಲಕ್ಷ್ಮಿ’ ಮತ್ತು ’ಗೃಹಜ್ಯೋತಿ’ ಯೋಜನೆಗಳ ಅನುಷ್ಠಾನವು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜಿಲ್ಲಾಡಳಿತ ಭವನದ ಕೇಸ್ವಾನ ಕಾನ್ಫರೆನ್ಸ್ ಹಾಲ್ ನಲ್ಲಿ ಶುಕ್ರವಾರ ಜುಲೈ (17) ರಂದು ಜರುಗಿದ ವಿಡಿಯೋ ಸಂವಾದದಲ್ಲಿ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗಳ ತಡೆ ಮತ್ತು ದುರುಪಯೋಗ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಮ್. ರೇವಣ್ಣ ಅಧಿಕಾರಿಗಳಿಗೆ ಸೂಚಿಸಿದರು.ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಪ್ಪು ಮಾಹಿತಿ ನೀಡಿ ಗ್ಯಾರೆಂಟಿ ಯೋಜನೆಗಳ ಲಾಭ ಪಡೆದಿರುವವರಿಂದ ನಿಯಮಾನುಸಾರ ಹಣವನ್ನು ಹಿಂಪಡೆಯಲು ಮತ್ತು ಈ ಪ್ರಕ್ರಿಯೆಯನ್ನು ಎರಡು ವಾರಗಳೊಳಗೆ ಪೂರ್ಣಗೊಳಿಸಲು ನಿರ್ದೇಶನ ನೀಡಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 