ಮಹಿಳಾ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆ ಅನುಷ್ಠಾನ: ಶಾಸಕ ಪಠಾಣ
Implementation of guarantee scheme for women empowerment: MLA Pathan
ಶಿಗ್ಗಾವಿ 31 : ಕುಟುಂಬದಲ್ಲಿ ಮಹಿಳೆಯರು ಆನಂದದಿಂದ ಜೀವನ ನಿರ್ವಹಿಸಲು ಸಿಎಂ ಸಿದ್ದರಾಮಯ್ಯನವರು ಮಹಿಳಾ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತಂದಿದ್ದಾರೆ ಎಂದು ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ ಹೇಳಿದರು.
ತಾಲೂಕಿನ ಬಾಡ ಗ್ರಾಮದ ಕನಕದಾಸರ ಕಲಾಭವನದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಹಮ್ಮಿಕೊಂಡ ಗ್ಯಾರಂಟಿ ಫಲಾನುಭವಿಗಳ ಸ್ಪಂದನಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ಕುಟುಂಬದ ಕಾಳಜಿ ಮಾಡುತ್ತಾರೆ. ನಾನೂ ಸಹಿತ ಒಂದು ಬಡ ಕುಟುಂಬದಲ್ಲಿ ಹುಟ್ಟಿದ್ದೇನೆ. ಹೀಗಾಗಿ ಬಡವರ ಕಷ್ಟ ಅರಿತಿದ್ದೇನೆ. ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಅಪಹಾಸ್ಯ ಮಾಡುತ್ತಿದ್ದಾರೆ. 60 ಸಾವಿರ ಕೋಟಿ ರೂ. ನೇರವಾಗಿ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ತಲುಪಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರ ಕಾರ್ಯ ಗ್ರಾಮೀಣ ಮಟ್ಟದಲ್ಲಿ ಶ್ಲಾಘನೀಯವಾಗಿದೆ. ಹೀಗಾಗಿ ಅವರ ಸಂಬಳ ಹೆಚ್ಚಿಸಲಾಗಿದೆ. ಶಿಗ್ಗಾವಿ-ಸವಣೂರ ತಾಲೂಕಿನ 400 ದೇವಸ್ಥಾನ ಅಭಿವೃದ್ಧಿ ಮಾಡಲಾಗುತ್ತಿದ್ದು ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರಿಗೆ 2 ಸಾವಿರ ಹಣ ಹಾಕುತ್ತಿರುವ ಏಕೈಕ ಸಿಎಂ ಸಿದ್ದರಾಮಯ್ಯನವರಾಗಿದ್ದಾರೆ ಎಂದರು. ಆಯ್ದ ಕೆಲ ಫಲಾನುಭವಿ ಮಹಿಳೆಯರನ್ನು ಸನ್ಮಾನಿಸಲಾಯಿತು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಎಫ್. ಮಣಕಟ್ಟೆ ಅಧ್ಯಕ್ಷತೆವಹಿಸಿದ್ದರು. ಜಿಲ್ಲಾ ಸಮಿತಿ ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ಪ್ರೇಮಾ ಪಾಟೀಲ, ವಸಂತಾ ಬಾಗೂರ, ಮಾಲತೇಶ ಸಾಲಿ, ಅತ್ತಾವುಲ್ಲಾಖಾನ ಖಾಜೇಖಾನವರ,ಉಮೇಶ ತಳವಾರ, ಶಕಿನಾಬಿ ಮುಲ್ಲಾ, ಸುರೇಶ ಶೆಟ್ಟೆಣ್ಣವರ, ಶಂಕರಗೌಡ ಪಾಟೀಲ, ಪರಶುರಾಮ ಕಾಳೆ, ಮೌಲಾಸಾಬ್ ತಡಸ, ಚಂದ್ರಶೇಖರ ಮಾನೋಜಿ, ಅಶೋಕ ಶಿಗ್ಗಾವಿ, ಸುರೇಶ ತಿಮ್ಮಾಪೂರ,ಬಾಬರ ಬೋವಾಜಿ ಅಣ್ಣಪ್ಪ ಲಮಾಣಿ ಸೇರಿದಂತೆ ಗ್ಯಾರಂಟಿ ಸಮಿತಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸದಸ್ಯರು ಹಾಗೂ ಫಲಾನುಭವಿಗಳು ಇದ್ದರು. ಶಿವಾನಂದ ಸಣ್ಣಕ್ಕಿ ಸ್ವಾಗತಿಸಿದರು, ಪ್ರಕಾಶ ಓಂದಕರ ಕಾರ್ಯಕ್ರಮ ನಿರ್ವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 