ಶಾಸಕ ರಾಜು ಕಾಗೆ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನ
Implementation of various development projects under the leadership of MLA Raju Kage
ಶಾಸಕ ರಾಜು ಕಾಗೆ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನ
ಅಥಣಿ, 24 ; ಕಾಗವಾಡ ಮತಕ್ಷೇತ್ರದಲ್ಲಿ ಶಾಸಕ ರಾಜು ಕಾಗೆ ನೇತೃತ್ವದಲ್ಲಿ ಜನಪರ, ಅಭಿವೃದ್ಧಿ ಕಾಮಗಾರಿಗಳು ದೊಡ್ಡ ಪ್ರಮಾಣದಲ್ಲಿ ಅನುಷ್ಠಾನ ಗೊಳ್ಳುತ್ತಿದ್ದು, ಶಾಸಕ ಕಾರ್ಯಕ್ಕೆ ನಾವೆಲ್ಲ ಸಹಕಾರ ನೀಡುವುದರ ಮೂಲಕ ಅವರಿಗೆ ಬಲ ತುಂಬ ಬೇಕು ಎಂದು ಮಾಜಿ ಜಿ.ಪಂ ಸದಸ್ಯ ರಾವಸಾಹೇಬ ಬೆವನೂರ ಹೇಳಿದರು. ಅವರು ತೆವರಟ್ಟಿ ಗ್ರಾಮದ ಬೀರದೇವರ ದೇವಸ್ಥಾನದ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
ಕಾಗವಾಡ ಮತಕ್ಷೇತ್ರದಲ್ಲಿ ರಸ್ತೆ, ನೀರಾವರಿ, ಖಠ, ಕುಡಿಯುವ ನೀರು ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಅನುಷ್ಠಾನಗೊಳಿಸುತ್ತಿರುವ ಶಾಸಕ ರಾಜು ಕಾಗೆ ಕಾಗವಾಡ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಗೊಳಿಸುತ್ತಿದ್ದಾರೆ ಎಂದ ಅವರು ರಾಜ್ಯದ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಕಾಗವಾಡ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಥಮ ಹಂತದಲ್ಲಿ 50 ಕೋಟಿ ಮತ್ತು ಎರಡನೇ ಹಂತದಲ್ಲಿ 25 ಕೋಟಿ ಅನುದಾನ ಮಂಜೂರು ಮಾಡಿದ್ದು, ಕಾಗವಾಡ ಮತಕ್ಷೇತ್ರದ ಜನರ ಪರವಾಗಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಮತ್ತು ಕ್ಷೇತ್ರದ ಶಾಸಕ ರಾಜು ಕಾಗೆ ಇವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಗುತ್ತಿಗೆದಾರ ಶಿವಾನಂದ ತೇಲಿ,ಶಂಕರ ಮುಜಗೊಣಿ,ಪಿಂಟು ಮಗದುಮ್,ಅಭಿಯಂತರ ಮಡಿವಾಳ ಪಾಟೀಲ,ಮುಖಂಡರಾದ ಸುಕುಮಾರ ಅನಗಲ್ಲಿ,ಶಿದ್ಲಿಂಗ ಘಟನಟ್ಟಿ,ಕುಮಾರ ಖೋತ,ಅಪ್ಪಾಸಾಬ ಘಟನಟ್ಟಿ,ಅಶೋಕ ಘಟನಟ್ಟಿ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 