ಭರತ್ ಹುಟ್ಟು ಹಬ್ಬದ ನಿಮಿತ್ಯ ಸಮಗ್ರ ಅಭಿವೃದ್ಧಿ ಉತ್ತೇಜಿಸುವ ಮಹತ್ವದ ಕಾರ್ಯಕ್ರಮಗಳು
Important programs to promote holistic development on the occasion of Bharat's birthday
ಶಿಗ್ಗಾವಿ 30 : ಶಿಗ್ಗಾವಿ-ಸವಣೂರ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಭರತ್ ಬೊಮ್ಮಾಯಿ ಅವರ 37 ನೇ ಜನ್ಮದಿನದ ಅಂಗವಾಗಿ ಆರೋಗ್ಯ, ಶಿಕ್ಷಣ, ಕೃಷಿ ಹಾಗೂ ಯುವಜನ-ಕ್ರೀಡೆ ಕ್ಷೇತ್ರಗಳಲ್ಲಿ ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸುವ ಹಲವು ಮಹತ್ವದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಭರತ್ ಬೊಮ್ಮಾಯಿ ಅಭಿಮಾನಿ ಬಳಗದ ಸದಸ್ಯರು ತಿಳಿಸಿದ್ದಾರೆ. 31 ರಂದು ಹುಟ್ಟು ಹಬ್ಬದ ಪ್ರಯುಕ್ತ, ಗ್ರಾಮೀಣ ಅಭಿವೃದ್ಧಿ ಮತ್ತು ಜನಸೇವೆಗೆ ಭದ್ರತೆಯನ್ನು ಪ್ರತಿಬಿಂಬಿಸುವ ನಾಲ್ಕು ಪ್ರಮುಖ ಕ್ಷೇತ್ರಗಳಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿವೆ ಅದರಲ್ಲಿ ಪ್ರಮುಖವಾಗ್ಷಿಕೃಷಿ ಕ್ಷೇತದಲ್ಲಿ ಹೊಸ ಹೆಜ್ಜೆ:ಸಣ್ಣ ರೈತರ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿ, ಶಿಗ್ಗಾವಿ ಕ್ಷೇತ್ರದಲ್ಲಿ ಕೃಷಿ ಸ್ಟೇಯಿಂಗಾಗಿ ಉಚಿತ ಡ್ರೋನ್ ತಂತ್ರಜ್ಞಾನ ಪರಿಚಯಿಸಲಾಗುತ್ತಿದೆ. ದಿ. 31 ರಂದು ರೈತರ ಹೊಲದಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುವುದು.
ಪ್ರಾರಂಭಿಕ ಹಂತದಲ್ಲಿ ಮೂರು ವಿಭಿನ್ನ ಪ್ರದೇಶಗಳ ರೈತರ ಹೊಲಗಳಲ್ಲಿ ಡ್ರೋನ್ ಸೇವೆಯ ಪ್ರಾಯೋಗಿಕ ನಡೆಯಲಿದೆ. ಈ ತಂತ್ರಜ್ಞಾನವು ಕೃಷಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದರೊಂದಿಗೆ ಕಾರ್ಮಿಕರ ಹೊರೆ ಕಡಿಮೆ ಮಾಡುವಲ್ಲಿಸಹಾಯಕವಾಗಲಿದೆ.ಗ್ರಾಮೀಣ ಶಿಕ್ಷಣದಲ್ಲಿ ಕ್ರಾಂತಿ: ತಾಲೂಕಿನ ನಾಲ್ಕು ಸರಕಾರಿ ಶಾಲೆಗಳ ಸಂಪೂರ್ಣ ರೂಪಾಂತರ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು ಶಾಲೆಗಳನ್ನು ಅಧಿಕೃತವಾಗಿ ಹಸ್ತಾಂತರಿಸಲಾಗಿದೆ. ಜಿ.ಹೆಚ್.ಪಿ.ಎಸ್ ಬನ್ನೂರ, ಹನುಮರಹಳ್ಳಿ, ಕಬನೂರ , ಸುರಪಗಟ್ಟಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ ರೂಂ ಸ್ಥಾಪನೆ, ಡಿಜಿಟಲ್ ಕಲಿಕೆ ವ್ಯವಸ್ಥೆಗಳು, ಸುಸಜ್ಜಿತ ಡೆಸ್ಕ್-ಬೆಂಚುಗಳು ಮತ್ತು ಶೈಕ್ಷಣಿಕ ಗೋಡೆಚಿತ್ರಗಳ ಮೂಲಕ ಆಧುನಿಕ ಕಲಿಕಾ ವಾತಾವರಣ ನಿರ್ಮಿಸಲಾಗಿದೆ. ಈ ಯೋಜನೆಯಿಂದ 450 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಿದ್ದು, ವಿದ್ಯಾರ್ಥಿಗಳ ಹಾಜರಾತಿ, ಆಸಕ್ತಿ ಮತ್ತು ಶೈಕ್ಷಣಿಕ ಫಲಿತಾಂಶಗಳಲ್ಲಿ ಗಮನಾರ್ಹ ಏರಿಕೆಕಂಡುಬಂದಿದೆ.
ಉಚಿತ ಆರೋಗ್ಯ ತಪಾಸಣೆ ಶಿಬಿರ: 31 ರಂದು ಬಂಕಾಪೂರದ ಶ್ರೀ ವಿಠಲ ರುಕ್ಕಿಣಿ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ವಿಹಾನ್ ಹಾರ್ಟ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಜಯಪ್ರಿಯ ಕಣ್ಣಿನ ಆಸ್ಪತ್ರೆ ಮತ್ತು ಅಶೋಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸಹಯೋಗದಲ್ಲಿ ನಡೆಯುವ ಈ ಶಿಬಿರದಲ್ಲಿ ಹೃದಯ, ಕಣ್ಣು, ಕಿವಿ ಮತ್ತು ಎಲುಬು ಸಂಬಂಧಿತ ತಪಾಸಣೆಗಳನ್ನು ಉಚಿತವಾಗಿ ನಡೆಸಲಾಗುತ್ತದೆ. ಬಿಪಿ, ಆರ್ ಬಿ ಎಸ್, ಇಸಿಜಿ, 2ಡಿ ಎಕೋ ಸೇರಿದಂತೆ ತಜ್ಞ ವೈದ್ಯರಿಂದ ಸಮಾಲೋಚನೆ ಸೌಲಭ್ಯವೂ ಲಭ್ಯವಿರುತ್ತದೆ.
ಯುವಜನ ಮತ್ತು ಕ್ರೀಡೆಗೆ ಉತ್ತೇಜನ: ಬೊಮ್ಮಾಯಿ ಟ್ರೋಫಿ - 2026' ಶಿಗ್ಗಾಂವ-ಸವಣೂರ ಚಾಂಪಿಯನ್ ಲೀಗ್ ಪಂದ್ಯಾವಳಿ ದಿ 25 ರಂದು ಆರಂಭಗೊಂಡಿದ್ದು, 31 ರಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯಲಿವೆ. ಯುವಜನರಲ್ಲಿ ಕ್ರೀಡಾ ಮನೋಭಾವವನ್ನು ಬೆಳೆಸುವ ಉದ್ದೇಶ ಹೊಂದಿದೆ.ಉದ್ಯೋಗ ಮತ್ತು ಯುವಜನ ಸಬಲೀಕರಣ: ಯುವಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ, ಮುಂದಿನ ತಿಂಗಳಲ್ಲಿ ವಿಶೇಷ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ. ಇದು ಜನ್ಮದಿನ ಆಚರಣೆಯ ಭಾಗವಾಗಿದ್ದು, ಸ್ಥಳೀಯ ಯುವಕರಿಗೆ ಉದ್ಯೋಗ ಸಂರಕ್ಷಣೆ ಕಲ್ಪಿಸುವ ಮಹತ್ವದ ಹೆಜ್ಜೆಯಾಗಲಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 