ಐದು ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ
Improvement in people's standard of living through the five guarantee schemes
ಲೋಕದರ್ಶನ ವರದಿ
ವಿಜಯಪುರ 29: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆಯಾಗಿದ್ದು, ಆರ್ಥಿಕವಾಗಿ ನೆರವು ದೊರೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ) ಹೇಳಿದರು.
ವಿಜಯಪುರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಸುಮಾರು 52 ಸಾವಿರ ಕೋಟಿ ಅನುದಾನ ವೆಚ್ಚ ಮಾಡಿದೆ ಎಂದರು.
ಶಕ್ತಿ ಯೋಜನೆಯಡಿ ವಿಜಯಪುರ ವಿಭಾಗದಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ 6.10 ಕೋಟಿ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದು, 83.05 ಕೋಟಿ ಮೌಲ್ಯದ ಪ್ರಯಾಣವಾಗಿದೆ. ಗೃಹಜ್ಯೋತಿ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯ 1,22,720 ಗ್ರಾಹಕರ ಪೈಕಿ 1,16,653 ಮಂದಿ ನೋಂದಾಯಿಸಿಕೊಂಡಿದ್ದಾರೆ.
ಯುವನಿಧಿ ಯೋಜನೆಯಡಿ ವಿಜಯಪುರ ತಾಲೂಕಿನಲ್ಲಿ 6,714 ಯುವಕರು ನೋಂದಾಯಿಸಿಕೊಂಡಿದ್ದು, 6,146 ಅರ್ಹರಿಗೆ 19.51 ಕೋಟಿ ನೆರವು ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ನೀಡಲಾಗುತ್ತಿದ್ದು, ಅನ್ನಭಾಗ್ಯ ಯೋಜನೆಯಿಂದ ಅರ್ಹ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಅಂಗಾರಕ ಸಂಕಷ್ಟಿ : ನೀಲಗಾರ ಗಣೇಶ ದರ್ಶನಕ್ಕೆ ಬೀಗಿ ಬಂದೋಬಸ್ತ್ : ಭಕ್ತರ ಸಂಖ್ಯೆ ಇಳಿಮುಖ
ಹಳೇ ವೈಷಮ್ಯ: ವ್ಯಕ್ತಿಯ ಅಪಹರಣ, ಕೊಲೆ: ನಾಲ್ವರು ಆರೋಪಿಗಳ ಬಂಧನ
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ 