ರಿಯಾದ್, ಅಕ್ಟೋಬರ್ 13: ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಮಧ್ಯಸ್ಥಿಕೆ ಪ್ರಯತ್ನಗಳ ಭಾಗವಾಗಿ ಭಾನುವಾರ ಇರಾನ್ ಮತ್ತು ಸೌದಿ ಅರೇಬಿಯಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.
ಖಾನ್ ಅವರ ಕಾರ್ಯಸೂಚಿಯಲ್ಲಿ ಈ ಪ್ರದೇಶದಲ್ಲಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಮಾರ್ಗಗಳ ಕುರಿತು ಚರ್ಚೆಗಳು ಸೇರಿವೆ ಎಂದು ಸ್ಪುಟ್ನಿಕ್ ವರದಿ ಮಾಡಿದೆ.
ಸೆಪ್ಟೆಂಬರ್ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಂದರ್ಭದಲ್ಲಿ ವಾಷಿಂಗ್ಟನ್ ಮತ್ತು ರಿಯಾದ್ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಇರಾನ್ನೊಂದಿಗೆ ಮಧ್ಯಸ್ಥಿಕೆ ವಹಿಸುವಂತೆ ತಮಗೆ ಕೇಳಿಕೊಂಡಿವೆ ಎಂಬ ಖಾನ್ ಹೇಳಿಕೆ ನಂತರ ಈ ಭೇಟಿ ನಿಗಧಿಯಾಗಿದೆ.