ಇಮ್ರಾನ್ ಪ್ರಮಾಣ ವಚನಕ್ಕೆ ಪ್ರಧಾನಿಗೆ ಆಹ್ವಾನ?
ಲಾಹೋರ್ 31: ಪಾಕಿಸ್ಥಾನದ ಮುಂದಿನ ಪ್ರಧಾನಿಯಾಗುವ ಇಮ್ರಾನ್ ಖಾನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಇಮ್ರಾನ್ ಅವರ ಪಿಟಿಐ ಪಕ್ಷ ಎಲ್ಲ ಸಾಕರ್್ ನಾಯಕರನ್ನು ಆಹ್ವಾನಿಸುವುದನ್ನು ಪರಿಗಣಿಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಮ್ರಾನ್ ಖಾನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಪಾಕ್ ಮಹಾ ಚುನಾವಣೆಯಲ್ಲಿ ಇಮ್ರಾನ್ ಅವರ ಪಿಟಿಐ ಪಕ್ಷ ಏಕೈಕ ದೊಡ್ಡ ಪಕ್ಷವಾಗಿ ಮೂಡಿ ಬಂದಿದೆ. ಅಂತೆಯೇ ಇಮ್ರಾನ್ ದೇಶದ ಪ್ರಧಾನಿಯಾಗಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ ಸಹಿತ ಎಲ್ಲ ಸಾಕರ್್ ನಾಯಕರನ್ನು ಆಹ್ವಾನಿಸುವುದನ್ನು ಪಿಟಿಐ ಪಕ್ಷ ಪರಿಗಣಿಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಈ ಬಗ್ಗೆ ಶೀಘ್ರವೇ ನಿಧರ್ಾರವನ್ನು ಕೈಗೊಳ್ಳಲಾಗುವುದು ಎಂದು ಪಿಟಿಐ ನಾಯಕರೋರ್ವರು ಹೇಳಿರುವುದನ್ನು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ಇಮ್ರಾನ್ ಖಾನ್ ಅವರು ಆಗಸ್ಟ್ 11ರಂದು ತಾನು ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಈಗಾಗಲೇ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ತನ್ನನ್ನು ಅಭಿನಂದಿಸಲು ಫೋನ್ ಕರೆ ಮಾಡಿರವುದು ಒಂದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಇದರಿಂದ ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಹೊಸ ಅಧ್ಯಾಯ ಆರಂಭಗೊಂಡಂತಾಗಿದೆ ಎಂದವರು ಹೇಳಿದ್ದಾರೆ.
ಪಿಟಿಐ ಪಕ್ಷದ ವಕ್ತಾರ ಫವಾದ್ ಚೌಧರಿ ಅವರು "ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸುವ ಸಾಧ್ಯತೆಯನ್ನು ತಳ್ಳಿ ಹಾಕಿಲ್ಲ. ಪಾಕ್ ವಿದೇಶ ಸಚಿವಾಲಯ ಈ ವಿಷಯದಲ್ಲಿ ಬೇಗನೆ ನಿಧರ್ಾರ ಕೈಗೊಳ್ಳುವುದೆಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 