ದಾಂಡೇಲಿ ನಗರದಲ್ಲಿ ಇತ್ತಿಚಿನ ದಿನಗಳಲ್ಲಿ ಬೀದಿ ನಾಯಿಗಳ ದಾಳಿ ಸಾರ್ವಜನಿಕರ ದೈನಂದಿನ ಜೀವನಕ್ಕೆ ಭಾರೀ ಆತಂಕ
In Dandeli city, attacks by stray dogs in recent days have posed a major threat to the daily lives o
ದಾಂಡೇಲಿ ನಗರದಲ್ಲಿ ಇತ್ತಿಚಿನ ದಿನಗಳಲ್ಲಿ ಬೀದಿ ನಾಯಿಗಳ ದಾಳಿ ಸಾರ್ವಜನಿಕರ ದೈನಂದಿನ ಜೀವನಕ್ಕೆ ಭಾರೀ ಆತಂಕ
ದಾಂಡೇಲಿ 04: ದಾಂಡೇಲಿ ನಗರದಲ್ಲಿ ಇತ್ತಿಚಿನ ದಿನಗಳಲ್ಲಿ ಬೀದಿ ನಾಯಿಗಳ ದಾಳಿ ತೀವ್ರಗೊಂಡಿದ್ದು ಸಾರ್ವಜನಿಕರ ದೈನಂದಿನ ಜೀವನಕ್ಕೆ ಭಾರೀ ಆತಂಕವುಂಟಾಗಿದೆ. ವಿಶೇಷವಾಗಿ ಬೆಳಗಿನ ಜಾವ ಪತ್ರಿಕಾ ವಿತರಕರು, ಹಾಲು ವಿತರಕರು, ಶಾಲಾ ಮಕ್ಕಳು ವೃದ್ದರು ಹಾಗೂ ದ್ವಿಚಕ್ರವಾಹನ ಸವಾರರ ಮೇಲೆ ಬೀದಿ ನಾಯಿಗಳು ಏಕಾಎಕಿ ದಾಳಿ ನಡೆಸಿ ಕಚ್ಚುತ್ತಿರುವ ಘಟನೆ ಹೆಚ್ಚಾಗುತ್ತಿದೆ.
ಬುಧವಾರ ಬೆಳಿಗ್ಗೆ ಗಣೇಶನಗರ ಪ್ರದೇಶದಲ್ಲಿ ಪ್ರತಿಕೆಯನ್ನು ಮನೆ ಮನೆಗೆ ತೆರಳಿ ವಿತರಿಸಿಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದ ರವಿ ಕಾಳೆ ಅವರನ್ನು ಬೀದಿ ನಾಯಿಯೊಂದು ಬೆನ್ನತ್ತಿ ಜಿಗಿದು ಕಚ್ಚಿ ಕೆಡವಿದ ಘಟನೆ ನಡೆದಿದೆ. ಘಟನೆಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ನಿವಾಸಿಗಳು ತಕ್ಷಣ ಧಾವಿಸಿ ಅವರನ್ನು ರಕ್ಷಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರು.
ಈ ಪ್ರದೇಶದಲ್ಲಿ ಬೀದಿ ನಾಯಿಗಳ ಗುಂಪೋಂದು ಸಕ್ರಿಯವಾಗಿದ್ದು, ವೃದ್ದರು ಮತ್ತು ಮಕ್ಕಳು ಮತ್ತು ಬೆಳಗಿನ ವಾಯು ವಿಹಾರಕ್ಕೆ ಹೋಗುವವವರ ಮೇಲೆ ಸಹ ದಾಳಿ ನಡೆಸುತ್ತಿದೆ ಎಂದು ಸ್ಥಳೀಯರು ತೀವ್ರ ಆಕ್ರೋಷ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಹಲವು ಬಾರಿ ನಗರಸಭೆಯ ಗಮನಕ್ಕೆ ತಂದರೂ ಯಾವುದೇ ಶಾಶ್ವತ ಕ್ರಮ ಕೈಗೋಳ್ಳಲಾಗುತ್ತಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಕೆಲ ದಿನಗಳ ಹಿಂದೆ ನಗರಸಭೆ ವತಿಯಿಂದ ಬೀದಿ ನಾಯಿಗಳು ಹಿಡಿದು ವಾಹನದಲ್ಲಿ ಸಾಗಿಸಿ ನಿಯಂತ್ರಿಸುವ ಕಾರ್ಯ ನಡೆಯುತ್ತಿತ್ತು. ಆದರೆ ಅದು ಅಚಾನಕ್ ಸ್ಥಗಿತಗೊಂಡಿರುವದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಸಂತಾನಹರಣ ಚಿಕಿತ್ಸೆಯ ಕೊರತೆ, ನಿರ್ಲಕ್ಷ ಹಾಗೂ ಆಹಾರದ ಕೊರತೆ ಬೀದಿ ನಾಯಿಗನ್ನು ಆಕ್ರಮಣಕಾರಿಯಾಗಿಸುವ ಪ್ರಮುಖ ಕಾರಣವಾಗಿದೆ.
ಸ್ಥಳೀಯ ಆಡಳಿತದ ವಿಫಲತೆಯಿಂದ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪ್ರತಿದಿನ ಒಂದಿಲ್ಲೊಂದು ಪ್ರದೇಶದಲ್ಲಿ ನಾಯಿ ಕಡಿತ ಪ್ರಕರಣಗಳು ವರದಿಯಾಗುತ್ತಿದ್ದು, ಕಳೆದ 5,6 ತಿಂಗಳಲ್ಲಿ 15 ಕ್ಕೂ ಹೆಚ್ಚು ಜನರು ನಾಯಿ ಕಡಿತಕ್ಕೋಳಗಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಈ ಸಮಸ್ಯೆ ನಿಯಂತ್ರಣಕ್ಕೆ ತ್ವರಿತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಕುರಿತು ನಗರಸಭಾ ಪೌರಾಯುಕ್ತರನ್ನು ಪ್ರಶ್ನಿಸಿದಾಗ ಅವರು ತಮ್ಮ ಅಸಹಾಯಕತೆ ವ್ಯಕ್ತ ಪಡಿಸಿದ್ದು, ಸ್ಥಳೀಯರು ಕಚ್ಚುವ ನಾಯಿಯ ಬಗ್ಗೆ ಖಚಿತ ಮಾಹಿತಿ ನೀಡಿದರೆ, ಅದನ್ನು ಹಿಡಿದು ರೇಬಿಸ್ ಪರೀಕ್ಷೆಗೊಳಪಡಿಸಿ ಚಿಕಿತ್ಸೆ ನೀಡಲು ಸಾಧ್ಯವಿದೆ ಎಂದು ತಿಳಿಸಿದ್ದಾರೆ. ಆದರೆ ಇದು ತಾತ್ಕಾಲಿಕ ಪರಿಹಾರವಾಗಿದ್ದು, ದೀರ್ಘಕಾಲಿಕವಾಗಿ ಬೀದಿ ನಾಯಿಗಳ ನಿಯಂತ್ರಣ, ಸಂತಾನಹರಣ ಚಿಕಿತ್ಸೆ, ಲಸಿಕೆ ವಿತರಣೆ ಹಾಗೂ ಆಹಾರ ನಿರ್ವಹಣೆಗೆ ವ್ಯವಸ್ಥಿತ ಯೋಜನೆ ರೂಪಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 