ಬೆಂಗಳೂರು, ಏ.1, ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡಿದ್ದ ಕಲಬುರಗಿಯ 19 ಜನರನ್ನು ಜಿಲ್ಲಾಡಳಿತವು ಇಎಸ್ ಐ ಆಸ್ಪತ್ರೆಯ ಕ್ವಾರಂಟೈನ್ ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಹಿಸಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡವರು ಸ್ವಯಂ ಪ್ರೇರಿತರಾಗಿ ವೈದ್ಯರ ಬಳಿ ಬಂದು ತಪಾಸಣೆಗೊಳಗಾಗಬೇಕು. ಸರ್ಕಾರದ ವತಿಯಿಂದಲೇ ಕ್ವಾರಂಟೈನ್ ನಲ್ಲಿಟ್ಟು, ಚಿಕಿತ್ಸೆ ನೀಡಲಾಗುತ್ತದೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡವರು ಮುಕ್ತವಾಗಿ ವೈದ್ಯರ ಬಳಿ ಬರಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ತಮ್ಮ ಕುಟುಂಬದ ಹಾಗೂ ಸಮಾಜದ ಆರೋಗ್ಯದ ಸಂರಕ್ಷಣೆಗಾಗಿ ಸ್ವಯಂ ಪ್ರೇರಿತವಾಗಿ ವೈದ್ಯರ ಬಳಿ ಬಂದು ಆರೋಗ್ಯ ತಪಾಸಣೆಗೊಳಗಾಗಬೇಕು. ಕೊರೊನಾ ವೈರಸ್ ನಿಯಂತ್ರಣ ಕ್ಕಾಗಿ ಸಹಕರಿಬೇಕು ಎಂದು ಗೋವಿಂದ ಎಂ ಕಾರಜೋಳ ಮನವಿ ಮಾಡಿದ್ದಾರೆ.