ಬೆಳಗಾವಿ ಅಧಿವೇಶನದಲ್ಲಿ ಸಕರ್ಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಗುರುವಾರ ಬಿಜೆಪಿ ಮಹತ್ವದ ಸಭೆ
ಬೆಂಗಳೂರು, ನ.27- ಬೆಳಗಾವಿ ಅಧಿವೇಶನದಲ್ಲಿ ಸಕರ್ಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕೈಗೊಳ್ಳಬೇಕಾದ ರಣತಂತ್ರಗಳು, ಪಕ್ಷದ ಸಂಘಟನೆ, ಲೋಕಸಭೆ ಚುನಾವಣೆಗೆ ಪೂರ್ವ ಸಿದ್ದತೆ ಸೇರಿದಂತೆ ಹತ್ತು ಹಲವು ವಿಷಯಗಳ ಬಗ್ಗೆ ಚಚರ್ಿಸಲು ಇದೇ 29ರಂದು ಬಿಜೆಪಿಯ ಮಹತ್ವದ ಸಭೆ ನಡೆಯಲಿದೆ.
ಅಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಕೋರ್ಕಮಿಟಿ ಸಭೆ, ಶಾಸಕಾಂಗ ಸಭೆ ಹಾಗೂ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಸಕರ್ಾರದ ವಿರುದ್ಧ ಅಧಿವೇಶನದಲ್ಲಿ ಹೋರಾಟ ನಡೆಸುವ ಬಗ್ಗೆ ಚಚರ್ೆ ನಡೆಯಲಿದೆ.
ಅಧಿವೇಶನದ ನಂತರ ರಾಜ್ಯ ರಾಜಕೀಯದಲ್ಲಿ ಕೆಲವು ಮಹತ್ವದ ಬದಲಾವಣೆಗಳು ನಡೆಯಲಿವೆ ಎಂಬ ಮಾತುಗಳು ಕೇಳಿ ಬರುತ್ತಿರುವುದು ಹಾಗೂ ಬಿಜೆಪಿಯೊಳಗಿನ ಕೆಲವು ಶಾಸಕರು ದೋಸ್ತಿ ಸಕರ್ಾರದ ಕೆಲವು ಪ್ರಭಾವಿ ನಾಯಕರ ಜತೆ ಆತ್ಮೀಯ ಒಡನಾಟ ಇಟ್ಟುಕೊಂಡಿರುವುದು ಕಮಲ ನಾಯಕರನ್ನು ಚಿಂತೆಗೀಡು ಮಾಡಿದೆ.
ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಕರ್ಾರವನ್ನು ಅಸ್ಥಿರಗೊಳಿಸಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿರುವ ಸಂದರ್ಭದಲ್ಲೇ, ಇದಕ್ಕೆ ಪ್ರತಿಯಾಗಿ ಬಿಜೆಪಿಯ ಕೆಲವು ಶಾಸಕರನ್ನು ಕಾಂಗ್ರೆಸ್ನ ಪ್ರಭಾವಿ ಸಚಿವರೊಬ್ಬರು ಸಂಪಕರ್ಿಸಿ ಮಾತುಕತೆ ನಡೆಸಿದ್ದಾರೆ ಎಂಬ ಮಾತು ಬಿಜೆಪಿ ಪಾಳಯದಲ್ಲಿ ಕೇಳಿಬರುತ್ತಿದೆ.
ಬೆಂಗಳೂರು ಮೂಲದ ಪ್ರಭಾವಿ ಶಾಸಕರೊಬ್ಬರು ಮೈಸೂರು ಹಾಗೂ ಚಿತ್ರದುರ್ಗ ಸೇರಿದಂತೆ ಮತ್ತಿತರ ಕೆಲವು ಜಿಲ್ಲೆಗಳ ಶಾಸಕರನ್ನು ಸೆಳೆದು ಆಪರೇಷನ್ ಕಮಲಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಲು ಈ ಪ್ರಭಾವಿ ಸಚಿವರು ತೆರೆಮರೆಯಲ್ಲಿ ಕಾರ್ಯತಂತ್ರ ಹೆಣೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ವಿಷಯ ಬಿಜೆಪಿ ಪಾಳಯ ತಲುಪಿರುವುದರಿಂದ ಅನ್ಯಪಕ್ಷಗಳತ್ತ ಹೋಗದಂತೆ ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಕೋರ್ಕಮಿಟಿ ಸದಸ್ಯರು ಮನವರಿಕೆ ಮಾಡಿಕೊಡಲಿದ್ದಾರೆ. ದೋಸ್ತಿ ಸಕರ್ಾರ ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆವರೆಗೂ ಅಧಿಕಾರದಲ್ಲಿ ಇರುವುದಿಲ್ಲ. ಕೇವಲ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂಬ ಒಂದೇ ಕಾರಣಕ್ಕಾಗಿ ಮೈತ್ರಿ ಮಾಡಿಕೊಂಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 