ನವದೆಹಲಿ, ಏ.27, ಫಿಲಿಪೈನ್ಸ್ ನಲ್ಲಿ ಒಂದೇ ದಿನ 198 ಹೊಸ ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 7,777ಕ್ಕೆ ಏರಿದೆ. ಸೋಮವಾರ ಆರೋಗ್ಯ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ. ಅಲ್ಲದೆ 70 ರೋಗಿಗಳು ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಒಟ್ಟಾರೆಯಾಗಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾದ ರೋಗಿಗಳ ಸಂಖ್ಯೆ 932ಕ್ಕೆ ಏರಿದೆ. ಅಲ್ಲದೆ 10 ಜನ ಮೃತ ಪಟ್ಟಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 511 ಆಗಿದೆ. ವೈರಸ್ ಹರಡುವುದನ್ನು ತಡೆಯಲು ರಾಜಧಾನಿ ಮನಿಲಾ, ಮುಖ್ಯ ಲುಜೋನ್ ದ್ವೀಪ ಮತ್ತು ಇತರ ಕೆಲವು ಸ್ಥಳಗಳಲ್ಲಿ ಮಾರ್ಚ್ ಮಧ್ಯದಿಂದ ಲಾಕ್ ಡೌನ್ ವಿಧಿಸಲಾಗಿದ್ದು, 2 ಮಿಲಿಯನ್ ಕಾರ್ಮಿಕರನ್ನು ಸ್ಥಳಾಂತರಿಸಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.