ಪಿ.ಯು.ಸಿ ವಿದ್ಯಾರ್ಥಿಗಳ ಸ್ವಾಗತ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
Inaugural Ceremony for PUC Student Welcome and Extracurricular Activities
ಲೋಕದರ್ಶನ ವರದಿ
ಯರಗಟ್ಟಿ 18 : ತಾಲೂಕಿನ ಸತ್ತಿಗೇರಿ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ಪಿ.ಯು.ಸಿ ಪ್ರಥಮ ವರ್ಷ ವಿದ್ಯಾರ್ಥಿಗಳ ಸ್ವಾಗತ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಎಸ್‌ಡಿಎಂಸಿ ಉಪಾಧ್ಯಕ್ಷ ಬಸಯ್ಯ ಸಾಲಿಮಠ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಅಛಲ ನಿರ್ಧಾರ ದೊಂದಿಗೆ ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು ದೊರೆಯುವುದು ಎಂದು ಹೇಳಿದರು. ಕಾಲೇಜು ಪ್ರಾಂಶುಪಾಲ ನಾಗರಾಜು ಕೆ. ಮಾತನಾಡಿ ಅವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ಕಾಲೇಜಿನಲ್ಲಿ ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಸೂಚಿಸುತ್ತದೆ.
ಪ್ರಾಂಶುಪಾಲರು ಮತ್ತು ಉಪನ್ಯಾಸಕರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾಲೇಜಿನ ನಿಯಮಗಳು ಹಾಗೂ ಪಠ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಮತ್ತು ಇದು ಹೊಸಬರಿಗೆ ಹಿರಿಯ ವಿದ್ಯಾರ್ಥಿಗಳೊಂದಿಗೆ ಬೆರೆಯಲು ಮತ್ತು ಪರಿಚಯ ಮಾಡಿಕೊಳ್ಳಲು ಉತ್ತಮ ಅವಕಾಶವಾಗಿರುತ್ತದೆ ಎಂದರು. ಈ ವೇಳೆ ಪಿಡಿಓ ಎ. ಬಿ. ಬಂಗಾರಿ, ಎಸ್‌ಡಿಎಂಸಿ ಸದಸ್ಯರಾದ ಈರಣ್ಣಾ ಹೊಸಮನಿ, ಉಮೇಶ ಮಾಗುಂಡನ್ನವರ, ವಿಠ್ಠಲ ಭಾಂಗಿ, ಉಪನ್ಯಾಸಕರಾದ ಎಸ್. ಟಿ. ಹಲಕಿ, ಬಿ. ಎಸ್. ದೊಡ್ಡಮನಿ, ಬಸವರಾಜ ಬಿಷ್ಠನ್ನವರ, ಚಿನ್ನಪ್ಪ ಹರಳಿ, ಸಿದ್ದಪ್ಪ ಹೊಂಗಲ, ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 