ಮಧ್ಯಸ್ಥಿಕೆಗಾರರ 05 ದಿನಗಳ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭ
Inaugural ceremony of 05-day training workshop for mediators
ಲೋಕದರ್ಶನ ವರದಿ
ಧಾರವಾಡ 22: ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಹೊಸದಾಗಿ ಮಧ್ಯಸ್ಥಿಕೆಗಾರರಾಗಿ ಕಾರ್ಯನಿರ್ವಹಿಸಲು ಹೊಸದಾಗಿ ನಿಯೋಜನೆ ಮಾಡಿಕೊಂಡ 50 ಜನ ಮಧ್ಯಸ್ಥಿಕೆಗಾರರಿಗೆ ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ಹಾಗೂ ಧಾರವಾಡ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ 05 ದಿನಗಳ ತರಬೇತಿ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮವನ್ನು ಜಿಲ್ಲಾ ನ್ಯಾಯಲಯದ ಸಂಕೀರ್ಣದಲ್ಲಿ ಆಯೋಜಿಸಲಾಗಿತ್ತು.
ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾಜಕುಮಾರ ಸಿ. (ಪ್ರಭಾರ) ಪ್ರಧಾನ, ಅವರು ಕಾರ್ಯಗಾರದ ಉದ್ಘಾಟನೆಯನ್ನು ಮಾಡಿದರು. ಮಧ್ಯಸ್ಥಿಕೆಗಾರರನ್ನು ಉದ್ದೇಶಿಸಿ ಮಾತನಾಡುತ್ತಾ ನ್ಯಾಯಲಯಗಳಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ರಾಜಿ ಸಂಧಾನದ ಪ್ರಕ್ರಿಯೆಯಲ್ಲಿ ಮಧ್ಯಸ್ಥಿಕೆಯು ತುಂಬಾ ಅತ್ಯಮೂಲ್ಯವಾದ ಹಂತವಾಗಿದೆ ಹಾಗೂ ಈ ಮಧ್ಯಸ್ಥಿಕೆಯ ಪ್ರಕ್ರಿಯೆಯಲ್ಲಿ ಮಧ್ಯಸ್ಥಿಕೆಗಾರರ ಪಾತ್ರ ಅತ್ಯಮೂಲ್ಯವಾದದ್ದು. ಆದ್ದರಿಂದ, ಈ ತರಬೇತಿ ಕಾರ್ಯಗಾರದ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಸುವರ್ಣಾ ಕೆ. ಮಿರ್ಜಿ, ಜಿಲ್ಲಾ ಮತ್ತು ಸತ್ರ ನ್ಯಾಯಲಯ ಹಾಗೂ ಅಧ್ಯಕ್ಷರು, ಖಾಯಂ ಜನತಾ ನ್ಯಾಯಲಯ, ಧಾರವಾಡ ಇವರು ವಹಿಸಿದ್ದರು.
ಅತಿಥಿಗಳಾಗಿ ಜಿಲ್ಲಾ ನ್ಯಾಯಧೀಶರಾದ ಗೌರವಾನ್ವಿತ ಎ.ಕೆ.ನಾಗರಾಜಪ್ಪ, ಗೌರವಾನ್ವಿತ ಜರೀನಾ, ಗೌರವಾನ್ವಿತ ಪೂರ್ಣಿಮಾ ಎನ್.ಪೈ. ಕರ್ನಾಟಕ ವಕೀಲರ ಪರಿಷತ್ತಿನ ಅಧ್ಯಕ್ಷರಾದ ವಿ.ಡಿ.ಕಾಮರೆಡ್ಡಿ, ಕರ್ನಾಟಕ ವಕೀಲರ ಪರಿಷತ್ತಿನ ಪೂರ್ವ ಅಧ್ಯಕ್ಷರು ಹಾಗೂ ಸದಸ್ಯರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆನಂದಕುಮಾರ ಎ ಮಗದುಮ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರೇತರ ಸದಸ್ಯರಾದ ಕೆ.ಎಲ್.ಪಾಟೀಲ, ಧಾರವಾಡ ವಕೀಲರ ಸಂಘದ ಅಧಕ್ಷರಾದ ಅಶೋಕ ವಿ ಏಣಗಿ ಹಾಗೂ ಮಧ್ಯಸ್ಥಿಕೆ ತರಬೇತಿದಾರರಾದ ಶೋಭಾ ಪಾಟೀಲ ಹಾಗೂ ಲಕ್ಷ್ಮೀಶರಾವ್ ಇವರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 