ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಶಿಬಿರದ ಉದ್ಘಾಟನಾ ಸಮಾರಂಭ,
Inaugural ceremony of NSS camp at Government First Grade College
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಶಿಬಿರದ ಉದ್ಘಾಟನಾ ಸಮಾರಂಭ
ನರೇಗಲ್ 07: ಎನ್‌ಎಸ್‌ಎಸ್ ಶಿಬಿರದಿಂದ ರಾಷ್ಟ್ರೀಯತೆ, ಭಾವೈಕ್ಯತೆ, ಸಹಬಾಳ್ವೆ, ನಾಯಕತ್ವ ಗುಣ ಬೆಳೆಯುತ್ತದೆ. ಇದರಿಂದ ಯುವಕರಲ್ಲಿ ಸೇವಾ ಮನೋಭಾವದ ಜತೆಗೆ ವೈಜ್ಞಾನಿಕತೆಯೂ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದು ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯ ಹನಮಂತಪ್ಪ ಎಚ್. ಅಬ್ಬಿಗೇರಿ ಹೇಳಿದರು. ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ವತಿಯಿಂದ ಮಜರೆ ಕೋಡಿಕೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಗುರುವಾರ ನಡೆದ ಎನ್‌ಎಸ್‌ಎಸ್ ಘಟಕದ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಡ ಹಾಗೂ ಗ್ರಾಮೀಣ ಭಾಗದ ಮಕ್ಕಳೇ ಹೆಚ್ಚಿನ ಪ್ರಮಾಣದಲ್ಲಿ ಕಲಿಯುವ ಇಲ್ಲಿನ ಸರ್ಕಾರಿ ಕಾಲೇಜಿಗೆ ಹೋಗಲು ರಸ್ತೆ ಸಮಸ್ಯೆ ಇರುವ ಕಾರಣ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಆದ್ದರಿಂದ ಆದಷ್ಟು ಬೇಗ ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿಕೊಡಬೇಕು ಎಂದರು. ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ ಮಾತನಾಡಿ, ಭೂಮಿಯ ಮೇಲೆ ನಾಯಕರು ಹುಟ್ಟುತ್ತಾರೆ, ಬೆಳೆಯುತ್ತಾರೆ, ಸಾಯುತ್ತಾರೆ. ಆದರೆ ನಾಯಕತ್ವ ಎಂದಿಗೂ ಸಾಯುವುದಿಲ್ಲ ಆದ್ದರಿಂದ ವಿದ್ಯಾರ್ಥಿಗಳು ತಮ್ಮನ್ನು ಕ್ರಿಯಾಶೀಲ ಮತ್ತು ಸಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ನಾಯಕತ್ವ ಗುಣಗಳಿಂದ ಉತ್ತಮ ಯೋಜನೆ ಮತ್ತು ಕಾರ್ಯದಿಂದ ಜೀವನದ ಸವಾಲುಗಳನ್ನು ಎದುರಿಸಲು ಸಿದ್ದರಾಗಬೇಕು ಎಂದರು. ಪ.ಪಂ. ಮುಖ್ಯಾಧಿಕಾರಿ ಮಹೇಶ ನಿಡಶೇಶಿ, ಸರ್ಕಾರಿ ಕಾಲೇಜಿನ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಕಾರ್ಯಗಳು ನಡೆದಿವೆ ಆದಷ್ಟು ಬೇಗ ಪರಿಹಾರ ಒದಗಿಸಲಾಗುವುದು ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು ಕಾಲೇಜಿನ ಪ್ರಾಂಶುಪಾಲ ಎಸ್. ಎಲ್. ಗುಳೆದಗುಡ್ಡ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸಕ್ರಿಯವಾಗಿ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ದೇಶದ ಆರ್ಥಿಕ ಭದ್ರತೆ, ಬಡತನ, ಸ್ವಚ್ಚತೆ, ಗ್ರಾಮೀಣತೆ, ಆರೋಗ್ಯದ ಕುರಿತು ವಿಶ್ಲೇಷಣೆ ಮಾಡುವ ಎಲ್ಲಾ ಅವಕಾಶಗಳನ್ನು ಲಭಿಸುತ್ತವೆ. ಇದನ್ನು ಯುವ ಜನತೆ ಸದ್ಭಳಕ್ಕೆ ಮಾಡಿಕೊಂಡರೆ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಪಟ್ಟಣ ಪಂಚಾಯ್ತಿ ಅಧ್ಯಕ್ಷ ಫಕೀರ್ಪ ಮಳ್ಳಿ, ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ ಅವರನ್ನು ಸನ್ಮಾನಿಸಲಾಯಿತು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಶಿವಮೂರ್ತಿ ಕುರೇರ, ಸುನಂದಾ ಮುಂಜಿ, ಅಂಜನಮೂರ್ತಿ ಕೆ. ಎಚ್, ಜಯಶ್ರೀ ಮುತಗಾರ, ವಿನಯಶ್ರೀ, ಶಶಿಕಲಾ ವಿ. ಎಸ್, ವಿ. ಸಿ. ಇಲ್ಲೂರ, ವಿ. ಕೆ. ಸಂಗನಾಳ, ಕಿರಣ ರಂಜಣಗಿ, ಎನ್. ಎಸ್. ಹೊನ್ನೂರ, ಚಂದ್ರು ಸಂಶಿ, ಎಸ್. ಬಿ. ಕಿನ್ನಾಳ, ಬಸವರಾಜ ಎಸ್. ಮಡಿವಾಳರ, ಬಿ. ಕೆ. ಕಂಬಳಿ, ಪ್ರೇಮಾ ಕಾತ್ರಾಳ, ಶ್ವೇತಾ ಹುಣಸಿಮರದ, ಶಂಕರ ನರಗುಂದ, ಎಂ. ಎಫ್. ತಹಶೀಲ್ದಾರ, ಕೆ. ಎನ್. ಕಟ್ಟಿಮನಿ, ಸಿದ್ದು ನವಲಗುಂದ, ಮಲ್ಲಪ್ಪ ಸಮಗಂಡಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 