ಸಮಗ್ರ ಜಲ ಸಂಪನ್ಮೂಲ ನಿರ್ವಹಣೆ ಕುರಿತು ಮೂವತ್ತು ದಿನಗಳ ಕಡ್ಡಾಯ ತರಬೇತಿ ಉದ್ಘಾಟನಾ ಕಾರ್ಯಕ್ರಮ
Inaugural program of thirty-day mandatory training on integrated water resources management
ಲೋಕದರ್ಶನ ವರದಿ
ಧಾರವಾಡ 22 : ಜಲ ಸಂಪನ್ಮೂಲ ಇಲಾಖೆಯಲ್ಲಿ ಹೊಸದಾಗಿ ನೇಮಕಗೊಂಡಿರುವ ಅಭಿಯಂತರರುಗಳಿಗೆ ‘ಸಮಗ್ರ ಜಲ ಸಂಪನ್ಮೂಲ ನಿರ್ವಹಣೆ ಕುರಿತು ಮೂವತ್ತು ದಿನಗಳ ಕಡ್ಡಾಯ ತರಬೇತಿ’ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರೊ. ಡಾ. ಸುರೇಶ ವಿ. ನಾಡಗೌಡರ, ಉಪ ಕುಲಪತಿಗಳು, ಮಹತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯ, ಗದಗ ರವರು ನೆರವೇರಿಸಿ ಮಾತನಾಡುತ್ತಾ, ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಜಲ ಸಂಪನ್ಮೂಲ ಇಲಾಖೆಗೆ ನೇರ ಸಂಬಂಧವಿದ್ದು, ಪ್ರತಿಯೊಬ್ಬ ಅಭಿಯಂತರರು ಇಲಾಖೆಯಿಂದ ನೀಡಲಾಗುವ ತರಬೇತಿಗಳಿಂದ ಜ್ಞಾನ, ಕೌಶಲ್ಯ ಅಭಿವೃದ್ಧಿಪಡಿಸಿಕೊಂಡು ಸಮರ್ಕ ನೀರಾವರಿ ಯೋಜನೆ ಅನುಷ್ಠಾನಗೊಳಿಸುತ್ತಾ ತಮಗೆ ವಹಿಸಿದ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು. ತಮ್ಮ ವ್ಯಾಪ್ತಿಯಡಿ ಬರುವ ನೀರು ಬಳಕೆದಾರರ ಸಹಕಾರ ಸಂಘಗಳನ್ನು ಸ್ವಇಚ್ಛೆಯಿಂದ ಬಲವರ್ಧನೆಗೊಳಿಸಲು ಮುಂದಾಗಬೇಕೆಂದು ಕರೆ ನೀಡಿದರು.
ಡಾ. ಗೀರೀಶ್ ಎನ್. ಮರಡ್ಡಿ, ನಿರ್ದೇಶಕರು, ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ), ಧಾರವಾಡ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ವಾಲ್ಮಿ ಸಂಸ್ಥೆಯಿಂದ ಹೊಸದಾಗಿ ನೇಮಕಗೊಂಡ ಇಲಾಖಾ ಅಭಿಯಂತರರುಗಳಿಗೆ 30 ದಿನಗಳ ಕಡ್ಡಾಯ ತರಬೇತಿಯನ್ನು ವ್ಯವಸ್ಥಿತವಾಗಿ ರಚನೆ ಮಾಡಿದ್ದು, ಅಭಿಯಂತರರು ಕಛೇರಿ ನಿರ್ವಹಣೆ, ನೀರು ನಿರ್ವಹಣೆ, ವಾರಾಬಂದಿ ಪದ್ಧತಿ, ಭೂಸ್ವಾಧೀನ ಪ್ರಕ್ರಿಯೆ ಮತ್ತು ಕೋರ್ಟ ಪ್ರಕರಣಗಳ ನಿರ್ವಹಣೆ, ನೀರಾವರಿ ಮತ್ತು ಸಹಕಾರ ಕಾಯ್ದೆ, ಅಧಿನಿಯಮಗಳು, ಆಣೆಕಟ್ಟು ನಿರ್ವಹಣೆ, ಟೆಂಡರ್ ಪ್ರಕ್ರಿಯೆ ಹಾಗೂ ವ್ಯಕ್ತಿತ್ವ ವಿಕಸನ ಸಮಗ್ರ ವಿಷಯಗಳ ಕುರಿತು ನುರಿತ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ. ಇದರ ಸದುಪಯೋಗ ಪಡಿಸಿಕೊಂಡ ಇಲಾಖೆಯ ಕಾರ್ಯಗಳನ್ನು ದಕ್ಷತೆಯಿಂದ ನಿರ್ವಹಿಸುವ ವ್ಯಕ್ತಿಯಾಗಿ ಹೊರಹೊಮ್ಮುವಂತೆ ಉತ್ತೇಜನ ನೀಡಿದರು.
ಇಂ. ಬಿ. ವೈ. ಬಂಡಿವಡ್ಡರ, ಪ್ರಾಧ್ಯಾಪಕರು ಹಾಗೂ ಕಾರ್ಯಕ್ರಮ ಸಂಯೋಜಕರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ಜಲ ಸಂಪನ್ಮೂಲ ಇಲಾಖೆಯಿಂದ ಹೊಸದಾಗಿ ನೇಮಕಗೊಂಡ ಅಭಿಯಂತರರು ಕಡ್ಡಾಯವಾಗಿ ವಾಲ್ಮಿ ಸಂಸ್ಥೆಯಲ್ಲಿ 30 ದಿನಗಳ ತರಬೇತಿ ಪಡಯಬೇಕು. ಸಂಸ್ಥೆಯಲ್ಲಿ ನಿಯಮಗಳನ್ನು ಪಾಲಿಸಿ, ಪ್ರಯೋಜನವನ್ನು ಪಡೆದು ನುರಿತ ಅಭಿಯಂತರರಾಗಬೇಕು ಎಂದು ತಿಳಿಸಿದರು. ಸಂಸ್ಥೆಯ ಸಹ ಪ್ರಾಧ್ಯಾಪಕರು ಹಾಗೂ ಕಾರ್ಯಕ್ರಮದ ಸಹ ಸಂಯೋಜರುಗಳಾದ ಇಂ. ಪ್ರಕಾಶ ಕಾತರಕಿ ಮತ್ತು ಇಂ. ಸದಾಶಿವ ರವರು ಉಪಸ್ಥಿತರಿದ್ದರು. ಇಂ. ಪ್ರದೀಪ ದೇವರಮನಿ, ಸಹ ಪ್ರಾಧ್ಯಾಪಕರು ವಾಲ್ಮಿ, ಧಾರವಾಡ ಇವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು, ಇಂ. ಅನಿಲಕುಮಾರ ಎನ್. ಮಸಳಿ, ಸಹ ಪ್ರಾಧ್ಯಾಪಕರು, ವಾಲ್ಮಿ, ಧಾರವಾಡ ಇವರು ವಂದಿಸಿದರು. ಶ್ರೀಮತಿ ಅನುರಾಧಾ ಮಳಗಿ ಇವರು ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಇಲಾಖೆಯ 60 ಅಭಿಯಂತರರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 