ವಿಧಾನಸಭೆ ಉಪ ಸಭಾಧ್ಯಕ್ಷರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ
Inauguration and foundation stone laying of various works by the Deputy Speaker of the Legislative A
ಹಾವೇರಿ 03 : ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರ್ಪ ಮಾನಪ್ಪ ಲಮಾಣಿ ಅವರು ಮಂಗಳವಾರ ಹಾವೇರಿ ನಗರ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ಹಾವೇರಿ ನಗರದಲ್ಲಿ ನೂತನ ಕಾರ್ಮಿಕ ಕಚೇರಿ ಸಂಕೀರ್ಣ (ಕಾರ್ಮಿಕ ಭವನ)ದ ಕಾಮಗಾರಿಯ ಭೂಮಿಪೂಜೆ ಮತ್ತು ಶೀಲಾನ್ಯಾಸ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬಾಲಕಿಯರ ಕ್ರೀಡಾ ವಸತಿ ನಿಲಯ ಹೊಸ ಕಟ್ಟಡದ ಉದ್ಘಾಟನೆ, ವನ ಮಹೋತ್ಸವ ಕಾರ್ಯಕ್ರಮ, ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹೆಚ್ಚುವರಿ ಕೊಠಡಿ, ಯೋಗ ಹಾಲ್, ಶೌಚಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ, ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ನೂತನ ಕಟ್ಟಡದ ಉದ್ಘಾಟನೆ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಶಂಕುಸ್ಥಾಪನೆ ನೆರವೇರಿಸಿದರು.
ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಮೈದೂರ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಕೆ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಕಾರ್ಮಿಕ ಇಲಾಖೆ ಬೆಳಗಾವಿ ಪ್ರಾದೇಶಿಕ ಕಚೇರಿ ಉಪ ಕಾರ್ಮಿಕ ಆಯುಕ್ತ ಅಮರೇಂದ್ರ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ತರನ್ನುಮ ಬೆಂಗಾಲಿ, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶಕುಮಾರ್ ಎಸ್.ಎಚ್. , ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಲತಾ ಬಿ.ಎಚ್., ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 