ನಿಧಾನ ಕಲಿಕಾ ಮಕ್ಕಳ ಅಭಿವೃದ್ಧಿಗಾಗಿ ಸಮುದಾಯ ಕಲಿಕಾ ಕೇಂದ್ರಗಳ ಉದ್ಘಾಟನೆ
Inauguration of Community Learning Centers for the development of slow learning children
ಲೋಕದರ್ಶನ ವರದಿ
ಯಮಕನಮರಡಿ 06 : ಸದೃಢ ಸಮಾಜದ ನಿರ್ಮಾಣದಲ್ಲಿ ಇಂದಿನ ಮಕ್ಕಳ ಪಾತ್ರ ಅತೀ ಮುಖ್ಯವಾಗಿದೆ. ಶಿಕ್ಷಣದ ಜೊತೆಗೆ ಮಕ್ಕಳು ವಿವಿಧ ಸಮಾಜಮುಖಿ ಚಟುವಟಿಕೆಗಳಲ್ಲಿ ಪಾಲ್ಗೊಂಡು ಅವರ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಿಕೊಳ್ಳಬೆಕೆಂದು ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ವೈಜಯಂತಿ ಚೌಗಲಾ ಅಭಿಪ್ರಾಯಪಟ್ಟರು.
ಬೆಂಗಳೂರಿನ ವಿಹಾನ್ ಸಂಸ್ಥೆ ಹಾಗೂ ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯ ಸಹಕಾರದೊಂದಿಗೆ ಹುಕ್ಕೇರಿ ತಾಲೂಕಿನ ಕರಗುಪ್ಪಿ ಹಾಗೂ ಬಸ್ಸಾಪೂರ ಗ್ರಾಮಗಳಲ್ಲಿ ನಿಧಾನ ಕಲಿಕಾ ಮಕ್ಕಳನ್ನು ಗುರುತಿಸಿ ಅವರ ಅಭಿವೃದ್ಧಿಗಾಗಿ ಪ್ರಾರಂಭಿಸಿರುವ ಸಮುದಾಯ ಕಲಿಕಾ ಕೇಂದ್ರಗಳನ್ನು ಉದ್ಘಾಟಿಸಿ ಮಾತನಾಡುತ್ತಾ ಪ್ರತಿಯೊಬ್ಬ ಮಕ್ಕಳಲ್ಲಿ ವಿಶೇಷ ಕೌಶಲ್ಯಗಳು ಇರುತ್ತವೆ ಅವುಗಳನ್ನು ಗುರುತಿಸಿ ಅವರ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯವಾಗಿದೆ ಎಂದರು.
ವಿಹಾನ್ ಸಂಸ್ಥೆಯ ಸಂಯೋಜಕರಾದ ರೇಖಾ ಬೆನಿವಾಡ ಮಾತನಾಡಿ ವಿಹಾನ್ ಸಂಸ್ಥೆಯ ಚಟುವಟಿಕೆಗಳನ್ನು ವಿವರಿಸಿ ಸಮುದಾಯ ಕಲಿಕಾ ಕೇಂದ್ರಗಳನ್ನು ಪ್ರಾರಂಭಿಸುತ್ತಿರುವದರ ಮೂಲ ಉದ್ಧೇಶಗಳನ್ನು ತಿಳಿಸಿದರು ಇದರ ಜೊತೆಗೆ ಕಲಿಕೆಯಲ್ಲಿ ಹಿಂದುಳಿದ ಶಾಲಾ ಮಕ್ಕಳಿಗೆ ಸಮುದಾಯ ಕಲಿಕಾ ಕೇಂದ್ರಗಳ ಮೂಲಕ ಉಚಿತವಾಗಿ ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕಳನ್ನು ಆಯೋಜಿಸಿ ಅವರನ್ನು ಮುಖ್ಯವಾಹಿನಿಗೆ ತರಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಕಲ್ಯಾಣ ಸಂಸ್ಥೆಯ ಸಂಯೊಜಕರಾದ ಎಂ ಎಸ್ ಚೌಗಲಾ, ಯೋಜನಾ ನಿರ್ದೇಶಕರಾದ ಸುರೇಖಾ ಪಾಟೀಲ ಹಾಗೂ ಯರಗಟ್ಟಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಕಿರಣ ಚೌಗಲಾ, ಕರಗುಪ್ಪಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಎ ಜಿ ಮುನ್ನೋಳ್ಳಿ, ಬಸ್ಸಾಪೂರ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಮೊಮಿನ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 