ದೇವರಹಿಪ್ಪರಗಿ ಪ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ

ದೇವರಹಿಪ್ಪರಗಿ 24: ಇತ್ತೀಚೆಗೆ ನೂತನವಾಗಿ ಪ.ಪಂ ಅಧ್ಯಕ್ಷರಾಗಿ ಜಯಶ್ರೀ ದೇವಣಗಾಂವ, ಉಪಾಧ್ಯಕ್ಷರಾಗಿ ರಮೇಶ ಮಸಿಬಿನಾಳ ಆಯ್ಕೆಯಾಗಿದ್ದು ಮಂಗಳವಾರದಂದು ಪ.ಪಂ ಸಭಾಭವನದಲ್ಲಿ ನಡೆದ ವಿಶೇಷ ಸಭೆಯಲ್ಲಿ ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷೆ ಜಯಶ್ರೀ ದೇವಣಗಾಂವ ಪಟ್ಟಣದ ಸಮಗ್ರ ಅಭಿವೃದ್ದಿ ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸಲು ಹಗಲಿರಳು ಶ್ರಮಿಸು ವುದಾಗಿ ಭರವಸೆ ನೀಡಿದರು. ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಸಾಮಾಜಿಕ ನ್ಯಾಯದಡಿಯಲ್ಲಿ ವಿಶ್ವಾಸವಿಟ್ಟು ಅಧ್ಯಕ್ಷರನ್ನಾಗಿ ಮಾಡಿದ್ದು, ಅವರ ಹೆಸರು ತರುವ ಕೆಲಸ ಮಾಡುತ್ತೇವೆ. ಅವರ ಹೆಸರಿಗೆ ಕಪ್ಪುಚುಕ್ಕೆ ಬರದಂತೆ ಆಡಳಿತ ನಡೆಸುವುದಾಗಿ ಹೇಳಿದರು.  

ನೂತನ ಉಪಾಧ್ಯಕ್ಷರಾದ ರಮೇಶ ಮಸಿಬಿನಾಳ ಅವರು ಮಾತನಾಡಿ, ಪಟ್ಟಣದ ಜನರ ಸಮಸ್ಯೆಗಳ ನಿವಾರಣೆಗೆಪಕ್ಷ ಮತ್ತು ವಿರೋಧ ಪಕ್ಷ ಎಂಬ ಭೇದ ಭಾವವಿಲ್ಲದೆ ಕೆಲಸ ಮಾಡೋಣ. ಎಲ್ಲರೂ ಸೇರಿ ಪಟ್ಟಣದ ಅಭಿವೃದ್ಧಿಗೆ ಶಾಸಕರು ಹಾಗೂ ಸಂಸದರ ಜೋತೆ ಕೈ ಜೋಡಿಸಿ. ಆಡಳಿತ ವರ್ಗದ ಅಧಿಕಾರಿಗಳಿಗೆ ಸಹಕಾರ ನೀಡಿ,ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿ, ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹಾಗೂ ಸಂಸದರಾದ ರಮೇಶ ಜಿಗಜಿಣಗಿ ಅವರ ಮಾರ್ಗದರ್ಶನದಂತೆ ಮಾದರಿ ಪಟ್ಟಣವನ್ನಾಗಿ ಮಾಡೋಣ ಎಂದರು. ಪುರಸಭೆ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟೆ ಅವರು ಮಾತನಾಡಿ, ನೂತನ ಪ.ಪಂ ಸದಸ್ಯರಗಳನ್ನು ಸ್ವಾಗತಿಸಿ ಸನ್ಮಾನಿಸಿದರು ನಂತರ ಸಭೆಯ ವಿಷಯಗಳ ಕುರಿತು ಚರ್ಚೆಯನ್ನು ಮಂಡಿಸಿದರು.  

ನಂತರ ವಿಶೇಷ ಸಾಮಾನ್ಯ ಸಭೆಯಲ್ಲಿ ಪಟ್ಟಣದಲ್ಲಿ ಅನಧಿಕೃತ ಕುಡಿಯುವ ನೀರಿನ ಸಂಪರ್ಕಗಳು ಹೆಚ್ಚಾಗಿದ್ದು, ಅಂತಹ ನಳದ ಜೋಡಣೆಗಳನ್ನು ಅಧಿಕೃತಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಉಪಾಧ್ಯಕ್ಷರಾದ ರಮೇಶ ಮಸಿಬಿನಾಳ ಅವರು ಮಾತನಾಡಿ ಬರುವ ಸಾಮಾನ್ಯ ಸಭೆಯನ್ನು ನೂತನ ಪಟ್ಟಣ ಪಂಚಾಯಿತಿ ಕಟ್ಟಡದಲ್ಲಿ ನಡೆಸಲು ಅಧಿಕಾರಿಗಳಿಗೆ ತಯಾರಿ ಮಾಡಿಕೊಳ್ಳಲು ತಿಳಿಸಿದರು.ಕಾಂಗ್ರೆಸ್ ಪಕ್ಷದ ಸದಸ್ಯರಾದ ಕಾಸು ಜಮಾದಾರ ಅವರು ಮಾತನಾಡಿ, ಪಟ್ಟಣದ ಅಭಿವೃದ್ಧಿಗೆ ಚರ್ಚಿಸಲು ಬರುವ ಸಾಮಾನ್ಯ ಸಭೆಗೆ ಶಾಸಕರನ್ನು ಅಹ್ವಾನ ನೀಡಬೇಕು ಎಂದು ಹೇಳಿದರು.ಸಂದರ್ಭದಲ್ಲಿ ಕೆಲ ಕಾಂಗ್ರೆಸ್ ಸದಸ್ಯರು ಗೈರು ಹಾಜರಾಗಿದ್ದರು.ಇದೇ ಸಂದರ್ಭದಲ್ಲಿ ಪ.ಪಂ ಸದಸ್ಯರುಗಳಾದ ಕಾಸುಗೌಡ ಬಿರಾದಾರ(ಜಲಕತ್ತಿ), ಶಾಂತಯ್ಯ ಜಡಿಮಠ, ರತ್ನಬಾಯಿ ದೇವೂರ, ಮಂಗಳೇಶ್ವರ ಕಡ್ಲೇವಾಡ, ಸಿಂಧೂರ ಡಾಲೇರ, ಸುಮಂಗಲಾ ಸೇಬೆನವರ, ದಾನಾಬಾಯಿ ಚವ್ಹಾಣ, ನಾಮನಿರ್ದೇಶಿತ ಸದಸ್ಯರಾದ ರಾಜು ಮೇಟಗಾರ,ಕಿರಿಯ ಅಭಿಯಂತರರಾದ ಗುರುರಾಜ ಬಿರಾದಾರ, ಸಿಬ್ಬಂದಿಗಳಾದ ಮುತ್ತುರಾಜ ಹಿರೇಮಠ, ಫೀರೋಜ ಮುಲ್ಲಾ ಸೇರಿದಂತೆ ಸಿಬ್ಬಂದಿ ವರ್ಗ, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಇದ್ದರು.