ಗದಗ ಜಿಲ್ಲಾಸ್ಪತ್ರೆ ಎನ್ಎಂಆರ್ ಸ್ಕ್ಯಾನ್ ಕೇಂದ್ರದ ಉದ್ಘಾಟನೆ
ಗದಗ 13: ಗದಗ ಜಿಲ್ಲಾಸ್ಪತ್ರೆಯಲ್ಲಿ 6.70 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾದ ಎನ್.ಎಂ.ಆರ್. ಸ್ಕ್ಯಾನ್ ಕೇಂದ್ರವನ್ನು ರಾಜ್ಯದ ಗಣಿ, ಭೂ ವಿಜ್ಞಾನ, ಅರಣ್ಯ, ಪರಿಸರ, ಜೀವಶಾಸ್ತ್ರ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಅಗತ್ಯವಾದ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಸಚಿವರು ಉದ್ಘಾಟಿಸಿದರು.
ರಾಜ್ಯದಲ್ಲಿ ಮೊಟ್ಟಮೊದಲಿಗೆ ಎನ್.ಎಂ. ಆರ್. ಸ್ಕ್ಯಾನ್ ಸೌಲಭ್ಯವನ್ನು ಉಚಿತವಾಗಿ ಒದಗಿಸುವ ಸೌಲಭ್ಯವನ್ನು ಗದಗ ಜಿಲ್ಲಾಸ್ಪತ್ರೆ ಹೊಂದಿದೆ ಎಂದು ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ. ಪಿ.ಎಸ್. ಭೂಸರೆಡ್ಡಿ ಮಾಹಿತಿ ನೀಡಿದರು.
ಶಾಸಕ ಎಚ್.ಕೆ.ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗದಗ ಜಿ.ಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಎಚ್ ಪಾಟೀಲ, ಶಾಸಕರಾದ ಕಳಕಪ್ಪ ಬಂಡಿ, ಜಿ.ಪಂ. ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚೂರ, ಗದಗ ತಾ.ಪಂ. ಸದಸ್ಯೆ ಮುಮ್ತಾಜ್ ಬಿ ನದಾಫ್, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿ.ಪಂ. ಸಿ.ಇ.ಓ ಡಾ. ಆನಂದ್ ಕೆ , ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಶ್ರೀನಾಥ ಜೋಶಿ, ಪ್ರಾಚಾರ್ಯ ಶ್ರೀನಿವಾಸ ದೇಶಪಾಂಡೆ, ಜಿಲ್ಲಾಸ್ಪತ್ರೆ ಸರ್ಜನ್ ಡಾ. ಬಿ.ಸಿ. ಕರಿಗೌಡರ, ವೈದ್ಯಕೀಯ ಅಧಿಕ್ಷಕ ಡಾ. ಪಲ್ಲೇದ, ಜಿ.ಎಸ್. . ಡಾ. ಬಿಜ್ಜಳ, ಮಹಿಳಾ ಮತ್ತು ಅಭಿವೃದ್ಧಿ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್., ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಜಿ.ವಿ. ಶಿರೋಳ, ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಜಿಲ್ಲಾಸ್ಪತ್ರೆ, ಜಿಮ್ಸ್ನ ಅಧಿಕಾರಿ, ಸಿಬ್ಬಂದಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 