ಜುಲೈ.9 ರಂದು ಬೆಟಗೇರಿಯಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನಓಷಧಿ ಕೇಂದ್ರ ಉದ್ಘಾಟನೆ
Inauguration of Pradhan Mantri Bharatiya Janosadhi Kendra at Betageri on 9th July
ಬೆಟಗೇರಿ 08: ಗೋಕಾಕ ತಾಲೂಕಿನ ಬೆಟಗೇರಿ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನಓಷಧಿ ನೂತನ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ಜುಲೈ.9 ರಂದು ಮುಂಜಾನೆ 10 ಗಂಟೆಗೆ ಸ್ಥಳೀಯ ವಿಪ್ರಾಗ್ರಾಕೃಸ ಸಂಘದ ಆವರಣದಲ್ಲಿ ನಡೆಯಲಿದೆ.
ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ, ಸತ್ತಿಗೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಈರಯ್ಯ ಹಿರೇಮಠ, ಹಣಮಂತ ವಡೇರ ನೇತೃತ್ವ, ಸ್ಥಳೀಯ ವಿಪ್ರಾಗ್ರಾಕೃಸ ಸಂಘದ ಅಧ್ಯಕ್ಷ ಬಸವಂತ ಕೋಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟನೆ ನೆರವೇರಿಸಲಿದ್ದಾರೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಢವಳೇಶ್ವರ, ನಿರ್ದೇಶಕರಾದ ನೀಲಕಂಠ ಕಪ್ಪಲಗುದ್ದಿ, ಸತೀಶ ಕಡಾಡಿ, ಜಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ, ಸಂಘದ ಉಪಾಧ್ಯಕ್ಷ ರೇವಣಸಿದ್ಧ ಸವತಿಕಾಯಿ, ಬೈಲಹೊಂಗಲ ಸಹಾಯಕ ನಿಭಂದಕಿ ಶಾಹಿನ್ ಅಖ್ತರ, ಬೆಳಗಾವಿ ಸಹಾಯಕ ಓಷಧ ನಿಯಂತ್ರಕ ಮೋಹನ ಕೆ.ಬಿ., ಇತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ರಾಜಕೀಯ ಮುಖಂಡರು, ಗಣ್ಯರು, ಸಹಕಾರಿ ಹಿರಿಯ ಧುರೀಣರು, ವಿವಿಧ ಸಂಘ-ಸಂಸ್ಥಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು, ಸ್ಥಳೀಯ ವಿಪ್ರಾಗ್ರಾಕೃಸ ಸಂಘದ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಮತ್ತೀತರರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 