ಪ್ರೊಫ್ಲೆಕ್ಸ್ ಸೀಟ್ ಸಭಾ ಮಂಟಪ ಚನ್ನರಾಜ ಹಟ್ಟಿಹೊಳಿ ಉದ್ಘಾಟನೆ
Inauguration of Proflex Seat Assembly Hall, Channaraja Hattiholi
ಪ್ರೊಫ್ಲೆಕ್ಸ್ ಸೀಟ್ ಸಭಾ ಮಂಟಪ ಚನ್ನರಾಜ ಹಟ್ಟಿಹೊಳಿ ಉದ್ಘಾಟನೆ
ಬೆಳಗಾವಿ 27: ಬೆಳಗುಂದಿ ಗ್ರಾಮದ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ಪ್ರೊಫ್ಲೆಕ್ಸ್ ಸೀಟ್ ಸಭಾ ಮಂಟಪವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಉದ್ಘಾಟಿಸಿದರು. ಲಕ್ಷ್ಮೀ ಹೆಬ್ಬಾಳಕರ್ ಅವರು ಶಾಸಕರಾದ ನಂತರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಚಿತ್ರಣ ಸಾಕಷ್ಟು ಬದಲಾವಣೆ ಕಾಣುತ್ತಿದೆ. ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳು ದೊಡ್ಡ ದೊಡ್ಡ ಹುದ್ದೆಗೇರಬೇಕೆನ್ನುವುದೇ ನಮ್ಮ ಅಪೇಕ್ಷೆ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಕೃಷ್ಣ ಬೆಳಗಾಂವ್ಕರ್, ಶಿವಾಜಿ ಬೋಕಡೆ, ಸೋಮಣ್ಣ ಗಾವಡಾ, ದಯಾನಂದ ಗಾವಡಾ, ಮನೋಹರ್ ಬೆಳಗಾಂವ್ಕರ್, ರಹಿಮಾನ್ ತಹಶೀಲ್ದಾರ, ಶಿವಾಜಿ ಬೆಟಗೇರಿಕರ್, ಸುರೇಶ್ ಕಿಣೇಕರ್, ಲಕ್ಷ್ಮಣ ಮುಗುಟಕರ್, ಕಿರಣ ಮೋಟನಕರ್, ಮುಕುಂದ ಹಿಂಡಾಲ್ಗೆಕರ್, ಮಹಾದೇವ್ ಪಾಟೀಲ, ಸಿ.ಇ.ಒ ರಾಜಗೋಳ್ಕರ್, ಇಂಜಿನಿಯರ್ ಶೇಗುಣಸಿ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 