ವಿಜಯಪುರ 10: ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಚಿಕ್ಕಪ್ಪಯ್ಯ ಸದಾಶಿವ ಅವರ ಜನ್ಮಭೂಮಿ ಸಾರವಾಡದಲ್ಲಿ ಗ್ರಾಮ ಪಂಚಾಯಿತಿಯ 15ನೆ ಹಣಕಾಸು ಆಯೋಗದ ನಿಧಿಯಲ್ಲಿ ನಿರ್ಮಿಸಿದ ಸಾರ್ವಜನಿಕ ಬಸ್ ತಂಗುದಾಣವನ್ನು ಸೋಮವಾರ ದಿ. 10 ರಂದು ಬೆಳಿಗ್ಗೆ 11. ಘಂಟೆಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಎಮ್.ಎಸ್. ಪಾಟೀಲ ಹಾಗೂ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಿ.ಬಿ. ಕಲ್ಲವ್ವಗೋಳ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಂತೋಷ ಸೋಮಕ್ಕನವರ, ಚಂದ್ರಕಾಂತ ವಾಲಿ, ಸದು ಬಿದರಿ, ಮಲ್ಲಪ್ಪ ಪಾರಶೆಟ್ಟಿ, ಗ್ರಾಮದ ಹಿರಿಯರಾದ ಸದಾಶಿವಯ್ಯ ಈ. ಜಮಖಂಡಿ ಹಾಗೂ ಊರಿನ ಗಣ್ಯರು ಗ್ರಾಮಸ್ಥರು ಸೇರಿದಂತೆ ಹಲವರು ಉಪಸ್ಥಿತರಿದ್ದರು.